ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನವೆಂಬರ್ 15 ರೊಳಗೆ ಬರ ಪರಿಸ್ಥಿತಿಯ ಅಧ್ಯಯನ ಮಾಡಿ ವರದಿ ಸಲ್ಲಿಸಿ- ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ..

ಮೈಸೂರು:  ನವೆಂಬರ್ 15 ರೊಳಗೆ ಬರ ಪರಿಸ್ಥಿತಿಯ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ  ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.                       ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ, ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ.ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದು ತಿಳಿಸಿದರು.

ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ.ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ 600 ಕೋಟಿ ರೂ.ಗಳ ಬಿಡುಗಡೆ ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ನಿನ್ನೆ ಹಣ ಬಿಡುಗಡೆ ಮಾಡಿದ್ದಾರೆ. 33 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ಕಳುಹಿಸಲಾಗಿತ್ತು. ಮೂವರಿಗೆ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಅವರ ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ.ಬರ ಪರಿಹಾರಕ್ಕಾಗಿ ಒತ್ತಾಯ ಮಾಡಲು ಪ್ರಧಾನಮಂತ್ರಿಳಿಗೆ ಹಾಗೂ ಗೃಹ ಸಚಿವರಿಗೆ ಪುನಃ ಪತ್ರ ಬರೆಯಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ಅವರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವ ಬಗ್ಗೆ ಸುದ್ದಿಗಾರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ಶಾಸಕರು ಇಲ್ಲಿ ಪ್ರವಾಸ ಮಾಡಿ ಏನು ಮಾಡುತ್ತಾರೆ ಎಂದರು. ಅವರಿಗೆ ಕರ್ನಾಟಕದ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ ಎಂದರು.

ಕಲಬುರಗಿಯಲ್ಲಿ ಕೆ.ಇ. ಎ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ಬಿಚ್ಚಿಸಿದ್ದು, ಬ್ಲೂಟೂತ್ ಬಳಕೆಯಾಗುವ ಬಗ್ಗೆ ಮಾತನಾಡಿ ಈ ಬಗ್ಗೆ ಸಂಪೂರ್ಣ ತನಿಖೆ ಮಾಡಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಿಎಂ ಕುರ್ಚಿ ಬಗ್ಗೆ ಬಿಜೆಪಿ ಚರ್ಚೆ ಮಾಡುತ್ತಿದ್ದಾರೆ. ನಮ್ಮ ಶಾಸಕರು ಸಚಿವರು ಈ ಬಗ್ಗೆ ಮಾತನಾಡಕೂಡದು ಎಂದು ತಿಳಿಸಲಾಗಿದೆ. ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದ್ದು, ಇನ್ನು ಮುಂದೆ ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಬಾರದು. ಏನಿದ್ದರೂ ನಿಮ್ಮ ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಿ ಎಂದು ಸೂಚಿಸಲಾಗಿದೆ ಎಂದರು.

ನಾಳೆಯೇ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾದರೆ ತಮ್ಮ 17 ಶಾಸಕರ ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ವ್ಯಂಗ್ಯ ವಾಗಿ ಹೇಳಿರುವುದು. ಕುಮಾರಸ್ವಾಮಿ ಅವರಿಗೆ ವ್ಯಂಗ್ಯ ವಾಗಿ ಹೇಳುವುದೂ ಬರುತ್ತದೆ ಎನ್ನುವುದೇ ನಮಗೆ ಖುಷಿ ಎಂದರು.

 

Related posts

ಸೆಪ್ಟೆಂಬರ್ 3 ರಂದು  ಜಿಲ್ಲಾ ಮಟ್ಟದ ಕುಸ್ತಿ ಕ್ರೀಡಾಕೂಟ ಆಯೋಜನೆ.

ಸಾಲಗಾರರಿಗೆ ಗುಡ್ ನ್ಯೂಸ್ ನೀಡಿದ ಆರ್ಬಿಐ

ಇಡೀ ರಾಜ್ಯ ಬರಗಾಲ ಘೋಷಣೆಗೆ ಆಗ್ರಹ: ಸೆ.25ರಂದು ಧರಣಿ ಸತ್ಯಾಗ್ರಹ-ರೈತಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ