ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕೇಂದ್ರದಿಂದ ಇನ್ನೂ ನಯಾಪೈಸೆ ನೆರವು ಸಿಕ್ಕಿಲ್ಲ: ಸಿಎಂ‌ ಸಿದ್ದರಾಮಯ್ಯ ಆಕ್ರೋಶ ವಾಗ್ದಾಳಿ.

ಬೆಂಗಳೂರು:  ಕೇಂದ್ರ ಸರಕಾರ ಇಂದಿನವರೆಗೆ ಒಂದು ಪೈಸೆ‌ ನೆರವನ್ನೂ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಬರ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿ ಒಂದು ತಿಂಗಳಾಗಿದೆ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ ಎಂದರು.

 

Related posts

ಬಿಜೆಪಿಯಲ್ಲಿ ಕಿತ್ತಾಟದಿಂದ ವಿಪಕ್ಷ ನಾಯಕನ ನೇಮಕ ಮಾಡಲೂ ಆಗುತ್ತಿಲ್ಲ- ಬಿಎಸ್ ವೈಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಅತ್ಯಗತ್ಯ : ಎಸ್.ಎನ್.ನಾಗರಾಜ

ಜೆಡಿಎಸ್ ಅಂದ್ರೆ  ದೇವೇಗೌಡರ ಕುಟುಂಬವಷ್ಟೆ: ಮುಂದಿನದಿನಗಳಲ್ಲಿ ಬಿಜೆಪಿ ಜೊತೆ ವಿಲೀನ – ಸಿಎಂ ಸಿದ್ಧರಾಮಯ್ಯ ಟಾಂಗ್  .