ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾವೇರಿ ನದಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತೀವೆ- ಸಿಎಂ ಸಿದ್ಧರಾಮಯ್ಯ ವಾಗ್ದಾಳಿ.

ಮೈಸೂರು: ಕರ್ನಾಟಕ ಜನರ ಹಿತ ಕಾಪಾಡುವುದು ನಮ್ಮ ಸರ್ಕಾರ ಬದ್ಧವಾಗಿದೆ. ಕಾವೇರಿ ವಿಚಾರದಲ್ಲಿ ನಾವು ವಿಫಲವಾಗಿದ್ದೇವೆ ಅನ್ನೋದು ಸರಿಯಲ್ಲ ಎಂದು ಸಿಎಂ ಸಿದ್ಧರಾಮಯ್ಯ ನುಡಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ,  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಪ್ರತಿಭಟನೆ ಮಾಡುವುದಕ್ಕೆ ನಾವು ಯಾವುದೇ ಅಡ್ಡಿಪಡಿಸುವುದಿಲ್ಲ. ಕಾವೇರಿ ನದಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತೀವೆ. ಜನರ ಹಿತಕ್ಕಾಗಿ ವಿಪಕ್ಷಗಳು ಹೋರಾಟ ಮಾಡುತ್ತಿಲ್ಲ ಎಂದು ಕಿಡಿಕಾರಿದರು.

ಮೇಕೆದಾಟು ಯೋಜನೆಯಿಂದ ಕರ್ನಾಟಕ-ತಮಿಳುನಾಡು ನಡುವಿನ  ಕಾವೇರಿ ನೀರಿನ ಸಮಸ್ಯೆ ಬಗೆಹರಿಸಬಹುದು. ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ಸಮಸ್ಯೆ ಸರಿಪಡಿಸಬಹುದು. ಮೇಕೆದಾಟು ಡ್ಯಾಂ ನಿರ್ಮಿಸಿದರೆ 67 ಟಿಎಂಸಿ ನೀರು ಸಂಗ್ರಹಿಸಬಹುದು. ಮಳೆ ಕೊರತೆ ಸಂದರ್ಭದಲ್ಲಿ ಉಭಯ ರಾಜ್ಯಗಳು ನೀರು ಬಳಸಬಹುದು  ಎಂದು ಸಿದ್ಧರಾಮಯ್ಯ ತಿಳಿಸಿದರು.

Related posts

ಇಂದು-ನಾಳೆ ‘ಇಂಡಿಯಾ’ ಮೈತ್ರಿಕೂಟದ ಮೂರನೇ ಸಭೆ.

ದೇಶ ಇನ್ನಷ್ಟು ಪ್ರಗತಿ ಸಾಧಿಸಲಿದೆ, ಸ್ವಾತಂತ್ರ್ಯೋತ್ಸವದಲ್ಲಿ ಕಲ್ಲಣ್ಣ ಅಭಿಮತ.

ಅತಿ ವೇಗದಲ್ಲಿ ಕರಗುತ್ತಿದೆ ಹಿಮ: ಎದುರಾಯ್ತು ಅಪಾಯದ ಆತಂಕ.