ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದಲ್ಲಿ ಬಿಜೆಪಿ ದಿವಾಳಿ: ಕಾಂಗ್ರೆಸ್ ಗೆ ಯಾರೇ ಬಂದರೂ ಸ್ವಾಗತ- ಸಿಎಂ ಸಿದ್ಧರಾಮಯ್ಯ.

ಮೈಸೂರು: ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದ್ದು,  ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ನುಡಿದರು.

ಮೈಸೂರಿನಲ್ಲಿ ಇಂದುಂ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ,  ರಾಜ್ಯದಲ್ಲಿ ನಾವು ಅಧಿಕಾರಕ್ಕೆ ಬಂದು 3 ತಿಂಗಳಾಗಿದೆ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನ ಆಯ್ಕೆ ಮಾಡಲು ಆಗಿಲ್ಲ. ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ.  ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ. ಆದರೆ ಪಕ್ಷದ ಸಿದ್ದಾಂತ ತತ್ವ ಒಪ್ಪಿ ಬರುವವರಿಗೆ ಅವಕಾಶವಿದೆ ಎಂದು ತಿಳಿಸಿದರು.

ಇಂದಿನಿಂದ  ಮೂರು ದಿನ ಮೈಸೂರಿನಲ್ಲಿ ಪ್ರವಾಸ ಮಾಡುತ್ತೇನೆ.  ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುಚೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆ ವಹಿಸಲಿದ್ದಾರೆ.  ರಾಜ್ಯದ ವಿವಿಧೆಡೆಯಂದ ಜನರು ಆಗಮಿಸುವ ನಿರೀಕ್ಷೆ ಇದೆ. ಆಗಸ್ಟ್ 30 ರಂದು ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ಸಿದ್ಧರಾಮಯ್ಯ ತಿಳಿಸಿದರು.

Related posts

ನಾನು ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ: ನನ್ನ ಪ್ರಯತ್ನ ಫಲಿಸಿಲ್ಲ – ಮಾಜಿ ಸಚಿವ ಶ್ರೀರಾಮುಲು

ಪೋಕ್ಸೋ ಪ್ರಕರಣ: ಮುರುಘ ಶ್ರೀಯ ಮತ್ತೆ ಬಂಧನ.

ಒಂಬತ್ತು ವರ್ಷಗಳ ಹಿಂದಿನ ಕಿಡ್ನಾಪ್ ಪ್ರಕರಣದ ಆರೋಪಿ ಬಂಧನ

TOD News