ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸರ್ಕಾರಿ ಶಾಲೆ ಮಕ್ಕಳಿಗೆ ಸಮನ್ವಯದಿಂದ ಸಮವಸ್ತ್ರ ವಿತರಣೆ

ಶಿವಮೊಗ್ಗ: ವಿದ್ಯಾರ್ಥಿಗಳು ಶಿಕ್ಷಣ ಚೆನ್ನಾಗಿ ಕಲಿತು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು. ಉನ್ನತ ಅಧಿಕಾರಿಗಳಾಗಿ ಸಮಾಜದ ಪ್ರಗತಿಗೆ ಸೇವೆ ಸಲ್ಲಿಸಬೇಕು ಎಂದು ಉಪ ವಿಭಾಗಾಧಿಕಾರಿ ಸತ್ಯನಾರಾಯಣ ಹೇಳಿದರು.

ಶಿವಮೊಗ್ಗ ತಾಲೂಕಿನ ಒಡ್ಡಿನಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ಸಮವಸ್ತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಶಿಕ್ಷಣ ನೀಡುವ ಜತೆಯಲ್ಲಿ ಅವರ ಆಸಕ್ತಿ ಕ್ಷೇತ್ರಗಳನ್ನು ಶಿಕ್ಷಕರು ಹಾಗೂ ಪೋಷಕರು ಗುರುತಿಸುವ ಕೆಲಸ ಮಾಡಬೇಕು. ಸರಿಯಾದ ಮಾರ್ಗದರ್ಶನ ನೀಡುವ ಮೂಲಕ ದೊಡ್ಡ ಕನಸುಗಳನ್ನು ಕಂಡು ಸಾಕಾರಗೊಳಿಸಲು ಪ್ರೇರಣೆ ನೀಡಬೇಕು ಎಂದು ತಿಳಿಸಿದರು.

ಸಮನ್ವಯ ಟ್ರಸ್ಟ್ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಾರ್ಗದರ್ಶನ ನೀಡುವ ಕೆಲಸ ಮಾಡುತ್ತಿದೆ. ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.

ಸಮನ್ವಯ ಟ್ರಸ್ಟ್ನ ಸಮನ್ವಯ ಕಾಶಿ ಮಾತನಾಡಿ, ನಮ್ಮ ಟ್ರಸ್ಟ್ ವತಿಯಿಂದ ಒಡ್ಡಿನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಸ್ವೀಕರಿಸಿದ್ದು, ಮಕ್ಕಳಿಗೆ ಸಮವಸ್ತ್ರ ವಿತರಿಸಲಾಗುತ್ತಿದೆ. ಶೈಕ್ಷಣಿಕ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಲು ವಿವಿಧ ರೀತಿ ತರಬೇತಿ ನೀಡಲಾಗುತ್ತಿದೆ. ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧಿಸಲು ಪ್ರೋತ್ಸಾಹಿಸುವ ಕೆಲಸ ಟ್ರಸ್ಟ್ ಮಾಡುತ್ತಿದೆ ಎಂದು ತಿಳಿಸಿದರು.

ಭದ್ರಾವತಿ ಬಿಇಒ ನಾಗೇಂದ್ರ, ಉಪ ತಹಸೀಲ್ದಾರ್ ಗಿರಿರಾಜ್, ಶಾಲೆಯ ಶಿಕ್ಷಕಿ ತ್ರಿವೇಣಿ, ಸಮನ್ವಯ ಟ್ರಸ್ಟ್ ವಿಜಯ್‌ಕುಮಾರ್, ಸಮನ್ವಯ ಟ್ರಸ್ಟ್ ಸ್ವಯಂ ಸೇವಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜೆಡಿಎಸ್-ಬಿಜೆಪಿ  ಮೈತ್ರಿ  ಬಗ್ಗೆ ದೆಹಲಿಯಲ್ಲೇ ಚರ್ಚೆಯಾಯಿತೇ..? -ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೊಟ್ಟ ಸ್ಪಷ್ಟನೆ ಏನು..?

ಕಾಂತರಾಜ್ ವರದಿಯನ್ನು ಶೀಘ್ರವೇ ಅನುಷ್ಠಾನಕ್ಕೆ ತರಬೇಕು-ಆರ್.ಕೆ. ಸಿದ್ದರಾಮಣ್ಣ ಆಗ್ರಹ.

ಬರ ಪರಿಹಾರಕ್ಕಾಗಿ ಸಿಎಂ ವಿಶೇಷ ಅಸಕ್ತಿ ವಹಿಸಿದ್ದಾರೆ -ಸಚಿವ ಕೆ.ಜೆ. ಜಾರ್ಜ್ ಅಭಿಮತ