ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಟೀಕೆ ಮಾಡುವುದು ಬಿಜೆಪಿಯವರಿಗೆ ಒಂದು ರೋಗ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಟೀಕೆ ಮಾಡುವುದು ಬಿಜೆಪಿಯವರಿಗೆ ಒಂದು ರೋಗ ಎಂದು ಸಚಿವ ಮಧು ಬಂಗಾರಪ್ಪ ವಿರೋಧ ಪಕ್ಷದವರನ್ನು ಟೀಕಿಸಿದರು.
ಅವರು ಇಂದು ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ನುಡಿದಂತೆ ನಡೆದಿದೆ. ಎಲ್ಲಾ ಗ್ಯಾರಂಟಿಗಳನ್ನು ನೀಡಿದೆ. ಮಾತು ಕೊಟ್ಟಂತೆ ನಡೆದುಕೊಂಡಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರು ಟೀಕಿಸುತ್ತಾರೆ. ಸೋತವರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಕುಟುಕಿದರು.
ಬಿಜೆಪಿಯವರನ್ನು ನಾವು ಕಡೆಗಣಿಸುತ್ತಿಲ್ಲ. ಸ್ವತಃ ಪ್ರಧಾನಿಯವರೇ ಬಿಜೆಪಿ ರಾಜ್ಯಾಧ್ಯಕ್ಷರನ್ನು ಸೇರಿದಂತೆ ಎಲ್ಲರನ್ನೂ ಬ್ಯಾರಿಕೇಡ್ ಹಿಂದೆ ನಿಲ್ಲಿಸಿದ್ದರು. ಅವರೇ ಉತ್ತರ ಕೊಡುತ್ತಿದ್ದಾರೆ ಎಂದು ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದ ನ್ಯಾಯಾಲಯದಲ್ಲಿದೆ. ಕಾನೂನನ್ನು ಗೌರವಿಸಬೇಕಾಗುತ್ತದೆ ಎಂದರು
ರಾಜ್ಯದಲ್ಲಿ ಮಳೆ ಇಲ್ಲದೆ ಬರಗಾಲದ ಸ್ಥಿತಿ ಎದುರಾಗಿರುವುದು ನಿಜ. ಶಿವಮೊಗ್ಗ ಜಿಲ್ಲೆಯನ್ನು ಕೂಡ ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಸೌಲಭ್ಯಗಳು ಸಿಗಬೇಕಾಗಿದೆ ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ವಿರೋಧ ಪಕ್ಷದವರು ಆರೋಪ ಮಾಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸುಮ್ಮಸುಮ್ಮನೆ ಹೀಗೆ ಆರೋಪ ಮಾಡುವುದು ಸರಿಯಲ್ಲ. ಆರೋಪ ಮಾಡುವುದೇ ಬಿಜೆಪಿಯವರ ಕೆಲಸ ಎಂದರು.
ಶಿವಮೊಗ್ಗ ವಿಮಾನ ನಿಲ್ದಾಣ ಆ.31ರ ನಾಳೆ ಸಾರ್ವಜನಿಕ ಸೇವೆಗೆ ಅಧಿಕೃತವಾಗಿ ಲಭ್ಯವಾಗಲಿದ್ದು, ಬೆಂಗಳೂರಿನಲ್ಲಿ ನಾಳೆ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವಿದ್ದು, ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸೂಚಿಸಿರುವುದರಿಂದ ವಿಮಾನ ನಿಲ್ದಾಣದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದರು.
ನಾಳೆ ಬೆಳಿಗ್ಗೆ ಬೆಂಗಳೂರಿನಿಂದ ಹೊರಡುವ ವಿಮಾನವು 11.05ಕ್ಕೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಈ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಎಂ.ಬಿ. ಪಾಟೀಲ್, ಸಂಸದ ಬಿ.ವೈ, ರಾಘವೇಂದ್ರ ಹಾಗೂ ಗಣ್ಯರು ಆಗಮಿಸುತ್ತಿದ್ದಾರೆ. ಆದರೆ ನಾನು ಬರಲಾಗುತ್ತಿಲ್ಲ ಎಂದ ಅವರು, ಗೃಹಲಕ್ಷ್ಮಿ ಅನುಷ್ಠಾನದ ಕಾರ್ಯಕ್ರಮದ ನಂತರ ವಿಮಾನ ನಿಲ್ದಾಣಕ್ಕೆ ತೆರಳಿ ಸಿದ್ಧತೆ ಪರಿಶೀಲಿಸುತ್ತೇನೆ. ನಾಳಿನ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಮುಖಂಡರುಗಳಾದ ಎನ್. ರಮೇಶ್, ಆಯನೂರು ಮಂಜುನಾಥ್, ಹೆಚ್.ಸಿ. ಯೋಗೇಶ್, ಚಂದ್ರಶೇಖರ್, ವೈ.ಹೆಚ್. ನಾಗರಾಜ್, ಎಸ್.ಪಿ. ಶೇಷಾದ್ರಿ, ಎಂ.ಎಸ್. ಸಿದ್ದಪ್ಪ, ಸಿ.ಎಸ್. ಚಂದ್ರಭೂಪಾಲ್, ಮಂಜುನಾಥ ಬಾಬು, ಸೌಗಂಧಿಕ ಸೇರಿದಂತೆ ಹಲವರಿದ್ದರು.

Related posts

ಉದ್ಯಾನ್ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ.: ಅಪಾಯದಿಂದ ಪಾರು.

ನಾಗರ ಪಂಚಮಿಯಂದು ಹಾಲೆರೆದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ದಯೆ, ವಾತ್ಸಲ್ಯ, ಪ್ರೀತಿ ಸಜ್ಜನರ ಸ್ವಭಾವ.

ಇಸ್ರೇಲ್-ಹಮಾಸ್ ಸಂಘರ್ಷ ಅಂತ್ಯಕ್ಕೆ ನೆರವಾಗಲು ರಷ್ಯಾ ಸಿದ್ಧ ಎಂದ ಪುಟಿನ್