ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸ್ಪರ್ಧಾತ್ಮಕ ಪರೀಕ್ಷೆಗಳು : ಸಿದ್ದತೆಗೆ ಡಿಸಿ ಸೂಚನೆ..

ಶಿವಮೊಗ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅ.28 ಮತ್ತು 29 ರಂದು ವಿವಿಧ ಇಲಾಖೆಗಳ ಸ್ಮರ್ಧಾತ್ಮಕ ಪರೀಕ್ಷೆಗಳು ಜಿಲ್ಲೆಯ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ರಿಂದ 12.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 4.30 ರವರೆಗೆ ನಡೆಯಲಿದೆ ಎಂದು ಜಿಲ್ಲದಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ದಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್‍ನ್ಯಾಷನಲ್ ಲಿಮಿಟೆಡ್ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ಕಲ್ಯಾಣ ಸಂಘಟಿಕರು, ಗ್ರೂಪ್-ಸಿ ಹುದ್ದೆಗೂ ಸಹ ಪ್ರಾಧಿಕಾರದಿಮದ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.
ದಿ: 28-10-2023 ರಂದು ನಗರದ 20 ಕೇಂದ್ರಗಳಲ್ಲಿ ಹಾಗೂ ದಿ: 29-10-2023 ರಂದು ಶಿವಮೊಗ್ಗ 24, ಭದ್ರಾವತಿ-06, ಸಾಗರ 02, ಶಿಕಾರಿಪುರ 03 ಸೇರಿದಂತೆ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಫಾಸಲೆಯವರೆಗೆ ಸಿಆರ್‍ಪಿಸಿ 1973 ರ ಕಲಂ 144 ರನ್ವಯ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡುವ ಕುರಿತು ಹಾಗೂ ಪರೀಕ್ಷಾ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಕ್ರಮ ವಹಿಸಲಾಗಿರುತ್ತದೆ.
ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯನ್ನು ಪ್ರವೇಶಿಸುವ ಪೂರ್ವದಲ್ಲಿ ಪೂರ್ಣ ತೋಳಿನ ಅಂಗಿಯನ್ನು ಧರಿಸಬಾರದು ಅಥವಾ ಯಾವುದೇ ಆಭರಣಗಳನ್ನು ಧರಿಸಬಾರದು(ಮಂಗಳಸೂತ್ರವನ್ನು ಹೊರತುಪಡಿಸಿ). ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾದ ಡ್ರೆಸ್‍ಕೋಡ್‍ನ್ನು ಅಭ್ಯರ್ಥಿಗಳು ಅನುಸರಿಸಬೇಕು.
ಹಿಜಾಬ್ ಧರಿಸುವ ಅಭ್ಯರ್ಥಿಗಳು ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಮಯದ ಒಂದು ಗಂಟೆ ಮುಂಚಿತವಾಗಿ ಹಾಜರಾಗಿ ತಪಾಸಣೆಗೆ ಒಳಪಡುವುದು ಕಡ್ಡಾಯವಾಗಿರುತ್ತದೆ. ಪ್ರಸ್ತುತ ದಿನಗಳಲ್ಲಿ ಬ್ಲೂಟೂತ್ ಬಳಕೆ ಹೆಚ್ಚಿರುವುದರಿಂದ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಹಾಗೂ ಯಾವುದೇ ರೀತಿಯ ಫೇಸ್ ಮಾಸ್ಕ್ ವಸ್ತುಗಳೊಂದಿಗೆ ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವುದನ್ನು ನಿಷೇಧಿಸಿದೆ.
ಪ್ರವೇಶ ಟಿಕೆಟ್‍ನೊಂದಿಗೆ ಅಭ್ಯರ್ಥಿಯ ಜೊತೆಗೆ ವೋಟರ್ ಐಡಿ, ಬಸ್‍ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‍ಪೋರ್ಟ್, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್‍ನಂತಹ ಯಾವುದೇ ಒಂದು ಮಾನ್ಯವಾದ ಗುರುತಿನ ಚೀಟಿಯನ್ನು ಹೊಂದಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 9449293450/9110642146 ನ್ನು ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬಿಜೆಪಿ ನಾಯಕರು ದೆಹಲಿಗೆ ಹೋಗಿ ಪ್ರಧಾನಿಗೆ ಒತ್ತಡ  ಹೇರಲಿ- ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ.

ರಾಜ್ಯ ಬಿ.ಜೆ.ಪಿ. ಅಧ್ಯಕ್ಷರ ಆಯ್ಕೆಯಾದ ಸಂದರ್ಭದಿಂದಲೆ ಬಿವೈ ವಿಜಯೇಂದ್ರ ಬಿಜೆಪಿಗೆ ಕಂಟಕ-ಜಿಲ್ಲಾ ಕಾಂಗ್ರೆಸ್ ವಕ್ತಾರ ವೈ.ಬಿ.ಚಂದ್ರಕಾಂತ್

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಂದು ಬಿವೈ  ವಿಜಯೇಂದ್ರ ಪದಗ್ರಹಣ: ಬಿಜೆಪಿ ಕಚೇರಿಯಲ್ಲಿ ಹೋಮ, ಹವನ