ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ವಲಸೆ ಶಾಸಕರು ವಾಪಸ್ ಕಾಂಗ್ರೆಸ್ ಸೇರ್ಪಡೆ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಬಿಜೆಪಿ ಶಾಸಕ ಎಸ್,ಟಿ ಸೋಮಶೇಖರ್ ಸೇರಿ ವಲಸೆ ಶಾಸಕತರು ವಾಪಸ್ ಕಾಂಗ್ರೆಸ್ ಸೇರ್ಪಡೆ ವಿಚಾರ ಸಂಬಂಧ ಈ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ಕೆಲ ಕಾರ್ಯಕರ್ತರು ಬಹಳ ಉತ್ಸಾಹದಿಂದ ಕೆಲಸ ಮಾಡಿದ್ದಾರೆ. ಎಸ್ ,ಟಿ ಸೋಮಶೇಖರ್ ವೈಯಕ್ತಿಕವಾಗಿ ಹೇಳಿರಬಹುದು.  ಈ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ. ನಾನು ಯಾರಿಗೂ ಯಾವುದೇ ಟಾಸ್ಕ್ ಕೊಟ್ಟಿಲ್ಲ ಎಂದರು.

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಲೋಡ್ ಶೆಡ್ಡಿಂಗ್ ಬಗ್ಗೆ ನನಗೆ  ಸರಿಯಾದ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತೇನೆ.  ಲೋಡ್ ಶೆಡ್ಡಿಂಗ್ ಗೂ ಗೃಹಜ್ಯೋತಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಆರ್ ಎಸ್ ನಿಂದ ತಮಿಳುನಾಡಿಗೆ ನೀರು ಬಿಡುವುದಕ್ಕೆ ವಿರೋಧ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ರೈತರನ್ನ ಕಾಪಾಡುವುದು ನಮ್ಮ ಜವಾಬ್ದಾರಿ ಹೀಗಾಗಿ ನೀರು ಬಿಟ್ಟಿದ್ದೇವೆ ಎಂದು ಸಮರ್ಥಸಿಕೊಂಡರು.

Related posts

ಅ. 28-29 ರಂದು ಶಿವಮೊಗ್ಗದಲ್ಲಿ ರಾಜ್ಯಮಟ್ಟಕ್ಕೆ ಸ್ಕೇಟಿಂಗ್ ಆಯ್ಕೆ ಪ್ರಕ್ರಿಯೆ.

ಮೆಡಿಕಲ್ ಕಾಲೇಜು ಸ್ಥಳಾಂತರ ಹಿನ್ನೆಲೆ: ರಾಮನಗರ ಬಂದ್ : ರೈತರು, ವ್ಯಾಪಾರಸ್ಥರಿಂದ ಬೆಂಬಲ.

ಡಿಕೆ ಶಿವಕುಮಾರ್ ವಿರುದ್ದ ಸಿಬಿಐ ತನಿಖೆ ವಾಪಸ್: ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ್.