ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕರಡು ಮತದಾರರ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಕೆಗೆ ಅವಧಿ ನಿಗದಿ

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2024ಗೆ ಸಂಬಂಧಿಸಿದಂತೆ 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ನು ದಿ: 27-10-2023 ರಂದು ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ಪ್ರಚುರಪಡಿಸಿದ್ದು ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿ: 09-12-2023 ರವರೆಗೆ ಕಾಲಾವಧಿಯನ್ನ ಚುನಾವಣಾ ಆಯೋಗವು ನಿಗದಿಪಡಿಸಿದೆ.
ಈ ಹಿನ್ನೆಲೆಯಲ್ಲಿ ಕರಡು ಮತದಾರರ ಪಟ್ಟಿಯಿಂದ ಬಾಧಿತರಾದವರು ತಮ್ಮ ಆಕ್ಷೇಪಣೆಯನ್ನು ಅವಶ್ಯಕತೆಗೆ ಅನುಗುಣವಾಗಿ ನಮೂನೆ 6, 7, 8 ನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಬಿಎಲ್‍ಓ ಆ್ಯಪ್ ಮೂಲಕ ಅಥವಾ https://www.nvsp.in/Web Portal ಹಾಗೂ Voter Helpline App ಮೂಲಕ ಸಲ್ಲಿಸಬಹುದಾಗಿರುತ್ತದೆ.
ಚುನಾವಣಾ ಆಯೋಗವು ಮತದಾರರ ವಿಶೇಷ ಆಂದೋಲನವನ್ನು ದಿ: 18-11-2023, 19-11-2023, 02-12-23 ಹಾಗೂ 03-12-2023 ರಂದು ನಿಗದಿಪಡಿಸಿದೆ. ಈ ದಿನಾಂಕಗಳಂದು ಮತಗಟ್ಟೆ ಮಟ್ಟದ ಅಧಿಕಾರಿಳು ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದು ಹಕ್ಕು ಮತ್ತು ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.
ಕರಡು ಮತದಾರರ ಪಟ್ಟಿಯನ್ನು ವೆಬ್‍ಸೈಟ್ Voter Helpline App  ರಲ್ಲಿ ಪರಿಶೀಲಿಸಬಹುದಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಹಾಗೂ ಶಿವಮೊಗ್ಗ ಗ್ರಾಮಾತರ ವಿಧಾನಸಭಾ ಕ್ಷೇತ್ರ ಸಹಾಯಕ ಮತದಾರರ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.

Related posts

ಅಜ್ಞಾನ, ಮೌಢ್ಯ, ಷೋಷಣೆ, ಜಾತೀಯತೆ, ಲಿಂಗತಾರತಮ್ಯ ದೂರ ಮಾಡಿ ಸಮಸಮಾಜ ನಿರ್ಮಿಸಿದವರು ಬಸವಣ್ಣ-

ರಾಗಿಗುಡ್ಡದಲ್ಲಿ ಗಲಾಟೆ ಪ್ರಕರಣ: ನಾಲ್ವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್.

ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಯಾಗಲಿ-ನಾಗರಿಕ ಹಿತರಕ್ಷಣಾ ಸಮಿತಿ ಆಗ್ರಹ