ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶಿವಮೊಗ್ಗದಲ್ಲಿ ಲಂಚ ಸ್ವೀಕರಿಸುವ ವೇಳೆ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ.

 

ಶಿವಮೊಗ್ಗ: ಲಂಚ ಸ್ವೀಕರಿಸುವಾಗ ಉಪ ತಹಶೀಲ್ದಾರ್  ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಉಪ ತಹಸೀಲ್ದಾರ್ ಪರಮೇಶ್ವರಪ್ಪ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ದಾಳಿ ಮಾಡಿದ್ದರು. ಉಪ ತಹಸೀಲ್ದಾರ್ ಪರಮೇಶ್ವರಪ್ಪ ಅವರು ಜಮೀನು ಖಾತೆ ಮಾಡಲು 40 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ನಡುವೆ  30 ಸಾವಿರ ರೂಪಾಯಿ ಪಡೆಯುವಾಗ ಲೋಕಾಯಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

Related posts

ಸಮಾಜ ತಿದ್ದುವ ಕೆಲಸವನ್ನು ಪತ್ರಿಕೆಗಳು ಮಾಡಬೇಕು- ಸಂಸದ ಬಿ.ವೈ. ರಾಘವೇಂದ್ರ

ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆ ನಡೆಯಲು ಬಿಡುವುದಿಲ್ಲ- ಗೃಹ ಸಚಿವ ಪರಮೇಶ್ವರ್.

ಚಂದ್ರಯಾನ ಯಶಸ್ವಿಯಾಗಲು ಶಿವಮೊಗ್ಗ ಯೋಗಪಟುಗಳ ಶುಭಹಾರೈಕೆ