ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜೆಸಿಐ ಸಂಸ್ಥೆಯಿಂದ ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ವಿತರಣೆ

 ಶಿವಮೊಗ್ಗ:  ತಾಲ್ಲೂಕಿನ ಬಿರನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೆ ಜೆ ಸಿ ಐ ಶಿವಮೊಗ್ಗ ಸ್ಟಾರ್ಸ್ ಸಂಸ್ಥೆಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು  ಅಳವಡಿಸಲಾಗಿದೆ. ಇಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು. ಶುದ್ಧ ಕುಡಿಯುವ ನೀರಿನ ಘಟಕದ ಅವಶ್ಯಕತೆ ಇರುವ ಮಾಹಿತಿಯನ್ನು ಪಡೆದು ಜೆಸಿಐ ಸಂಸ್ಥೆ ಶುದ್ದ ಕುಡಿಯುವ ನೀರಿನ ಘಟಕವನ್ನು ವಿದ್ಯಾರ್ಥಿಗಳಿಗಾಗಿ ಶಿಕ್ಷಕರಿಗಾಗಿ ಅಳವಡಿಸಿದೆ.
  ಜೆ ಸಿ ಐ ಭಾರತದಲ್ಲಿ ಜೆ ಸಿ ಐ ವಿಲ್ ವೀಕ್ ಕಾರ್ಯಕ್ರಮ ನಡೆಯುತ್ತಿದ್ದು ಪ್ರತಿದಿನ ವಿಶೇಷ ಕಾರ್ಯಕ್ರಮ ವಿಶೇಷ ಸ್ಥಳಗಳಲ್ಲಿ ನಡೆಯುತ್ತಿದೆ. ಸಾವಿರಾರು ಜನರಿಗೆ ಒಂದಲ್ಲ ಒಂದು ರೀತಿಯಲ್ಲಿ ಕಾರ್ಯಕ್ರಮದ ಉಪಯೋಗವಾಗುತ್ತಿದೆ. ಮೆಡಿಕಲ್ ಕ್ಯಾಂಪ್, ಬ್ಲಡ್ ಡೊನೇಷನ್, ಆಹಾರ ವಿತರಣೆ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವುದು, ಗಿಡ ನೆಡುವುದು, ಹೀಗೆ ಹತ್ತು ಹಲವು ಕಾರ್ಯಕ್ರಮಗಳು ನಿರಂತರವಾಗಿ ಜೆ ಸಿ ಐ ಸಪ್ತಾಹದಲ್ಲಿ ನಡೆಯುತ್ತಿದೆ ಎಂದು ಜೆಸಿಐ ಶಿವಮೊಗ್ಗ ಸ್ಟಾರ್ಸ್ ಸಂಸ್ಥೆಯ ಅಧ್ಯಕ್ಷರಾದ ಜೆಸಿ ಅಶ್ವಿನಿ ಚಂದ್ರಶೇಖರ್ ಮಾತನಾಡಿದರು.
    ಆರಾಧನಾ ಆರ್ಥೋಪೆಡಿಕ್ ಹಾಸ್ಪಿಟಲ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಜೆಸಿಎ ಸಂಸ್ಥೆಯ ಮೂಲಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಳವಡಿಸಲಾಯಿತು.
     ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಜೆ ಸಿ ಡಾ. ಶೋಭಾ, ಜೆ ಸಿ ವಿಜಯಲಕ್ಷ್ಮಿ, ಜೆ ಸಿ ಪ್ರಿಯಾಂಕ ಗೌಡ, ಜೆಸಿ ಸಂತೋಷ, ಜೆಸಿ ನವೀನ್ ತಲಾರಿ, ಶಾಳೆಯ ಮುಖ್ಯ ಶಿಕ್ಷಕರಾದ ಹಿರೇಮಠ್ ಹಾಗೂ ಶಾಲೆಯ ಸಿಬ್ಬಂದಿ ವರ್ಗ ಎಸ್ ಟಿ ಎಂ ಸಿ ಕಮಿಟಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಕ್ಕಳಲ್ಲಿ ಪ್ರತಿಭೆ ಹೊರ ತೆಗೆಯಲು ಪ್ರತಿಭಾ ಕಾರಂಜಿ ಸಹಾಯಕ- ಶ್ರೀ ಪ್ರಸನ್ನನಾಥ ಸ್ವಾಮೀಜಿ

ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ದೀಕ್ಷಾ ಹೆರಿಟೇಜ್ ಶಾಲೆಯ ಮಕ್ಕಳು…

ಹಿಂದೂ ಮಹಾಸಭಾ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾಪೂರ್ವ ಮೆರವಣಿಗೆಗೆ ವೈಭವದ ಚಾಲನೆ.