ಕನ್ನಡಿಗರ ಪ್ರಜಾನುಡಿ
ನಮ್ಮ ವಿಶೇಷಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರ

ಮೈಸೂರಲ್ಲಿ 28ಕ್ಕೆ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಮತ್ತು ಸಿರಿಧಾನ್ಯ ನಡಿಗೆ

ಮೈಸೂರು: ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ಸಾರ್ವಜನಿಕರಲ್ಲಿ ಸಿರಿಧಾನ್ಯಗಳ ಬಗ್ಗೆ ಅರಿವು ಮೂಡಿಸಲು ಡಿ. 28ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ನಡಿಗೆ ಆಯೋಜಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಎಸ್. ಚಂದ್ರಶೇಖರ್ ಹೇಳಿದರು.

ನಗರದ ಕಾಡಾ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8 ಗಂಟೆಗೆ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ನಡಿಗೆಗೆ ಚಾಲನೆ ನೀಡಲಿದ್ದು, ಅಲ್ಲಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಹಳೆಯ ಜಿಲ್ಲಾಧಿಕಾರಿ ಕಚೇರಿ ತಲುಪಲಿದೆ ಎಂದರು.

ಬೆಳಗ್ಗೆ 11ಕ್ಕೆ ಪಿ. ಕಾಳಿಂಗರಾವ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಉದ್ಘಾಟಿಸುವರು. ಈ ಹಬ್ಬದಲ್ಲಿ 500ಕ್ಕೂ ಹೆಚ್ಚು ರೈತರು ಭಾಗವಹಿಸುವರು. ಸಿರಿಧಾನ್ಯ ಬೆಳೆಯುವ ಸುಧಾರಿತ ಕ್ರಮಗಳು, ಅವುಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಸಿರಿಧಾನ್ಯಗಳಿಂದ ತಯಾರಿಸಬಹುದಾದ ಖಾದ್ಯಗಳ ಬಗ್ಗೆ ನುರಿತ ತಜ್ಞರಿಂದ ಉಪನ್ಯಾಸ ಏರ್ಪಡಿಸಲಾಗಿದೆ ಎಂದರು.

ಇದಲ್ಲದೆ, ಸಿರಿಧಾನ್ಯಗಳ ಮೌಲ್ಯವರ್ಧನೆಗೊಳಿಸಿ ಮಾರಾಟ ಮಾಡಲು ಇಚ್ಛಿಸುವ ಉದ್ದಿಮೆದಾರರಿಗೆ ಅವರ ಉತ್ಪನ್ನ ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಅನುಕೂಲವಾಗುವಂತೆ 20 ಮಾರಾಟ ಮಳಿಗೆ ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದರು.

Related posts

ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಏಕೆ ಬೀಳಿಸಬಾರದು, ಇದರಲ್ಲಿ ತಪ್ಪೇನಿದೆ-ಕೆ.ಎಸ್. ಈಶ್ವರಪ್ಪ

ಅಲಂಕಾರ ತೆರವುಗೊಳಿಸುವ ವಿಚಾರಕ್ಕೆ ಬಿಗುವಿನ ವಾತಾವರಣ: ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ.

 ನವೆಂಬರ್ , ಡಿಸೆಂಬರ್ ನಲ್ಲಿ ಜಾತಿಗಣತಿ ವರದಿ  ಸಲ್ಲಿಕೆ: ವರದಿ ಸ್ವೀಕಾರಕ್ಕೆ ಬದ್ಧ- ಸಿಎಂ ಸಿದ್ದರಾಮಯ್ಯ