ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಗುರುಪುರದ ಬಿಜಿಎಸ್ ಶಾಲೆಯಲ್ಲಿ ಆ. 30 ರಂದು ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟ.

ಶಿವಮೊಗ್ಗ:   2023 – 24ನೇ ಸಾಲಿನ 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಹ್ಯಾಂಡ್ ಬಾಲ್ ಆಯ್ಕೆಯ ಪ್ರಕ್ರಿಯೆಯನ್ನು ದಿನಾಂಕ :30 /8/ 2023 ರಂದು ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗುರುಪುರದ  ಬಿಜಿಎಸ್ ಕ್ರೀಡಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸರ್ಕಾರಿ,  ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳ ಬಾಲಕ ಮತ್ತು ಬಾಲಕಿಯರು ಅಂದು ಬೆಳಿಗ್ಗೆ 9 :30 ಗಂಟೆಯೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು  ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ – ಶ್ರೀ ನಿರಂಜನ್ ಮೂರ್ತಿ, ಬಿ. ಹೆಚ್. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳು,9449050986 ಮತ್ತು ರಾಮಚಂದ್ರಪ್ಪ,ಹೆಚ್. ತಿಮ್ಮೇನಹಳ್ಳಿ ದೈಹಿಕ ಶಿಕ್ಷಣ ಶಿಕ್ಷಕರು. 9880839575 ಸಂಪರ್ಕಿಸಿ.

Related posts

ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ನ.26ರಿಂದ 28ರ ವರೆಗೆ 72 ಗಂಟೆಗಳ ಮಹಾಧರಣಿ.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಕುವೆಂಪು ವಿ.ವಿ.ಯಲ್ಲಿ ಸಂವಿಧಾನ ಪೀಠಿಕೆ ಓದು.

ಡೀಸೆಲ್ ಎಂಜಿನ್ ವಾಹನಗಳ ಬಳಕೆದಾರರಿಗೆ ಶಾಕ್: ಶೇ.10ರಷ್ಟು ಹೆಚ್ಚುವರಿ ತೆರಿಗೆ ವಿಧಿಸಲು ಸರ್ಕಾರ ಪ್ಲಾನ್.