ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರಕ್ಕೆ ರಾಜೀನಾಮೆ ಮತ್ತು ನಿವೃತ್ತಿಯ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕ: ಕಾರಣವೇನು ಗೊತ್ತೆ..?

ವಿಜಯಪುರ:  ನನ್ನ ಕ್ಷೇತ್ರದ ಗ್ರಾಮಗಳಿಗೆ ನೀರು ಬಿಡದಿದ್ದರೆ ರಾಜೀನಾಮೆ ನೀಡುವುದಾಗಿ ತಮ್ಮದೇ ಸರ್ಕಾರಕ್ಕೆ  ವಿಜಯಪುರ ಜಿಲ್ಲೆ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಶಾಸಕರ ಯಶವಂತರಾಯಗೌಡ, ಇಂಡಿ ತಾಲೂಕಿನ ಕಟ್ಟಕಡೆಯ ಹಳ್ಳಿಗಳಿಗೂ ಕಾಲುವೆ ನೀರು ಬಂದಿಲ್ಲ, ಗುತ್ತಿ ಬಸವಣ್ಣ ಏತ ನೀರಾವರಿ, ಇಂಡಿ ಶಾಖಾ ಕಾಲುವೆಯಿಂದ ನೀರು ಹರಿಸಬೇಕು. ಒಂದು ವೇಳೆ ನನ್ನ ಕ್ಷೇತ್ರಕ್ಕೆ ನೀರು ಬರದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಕ್ಷೇತ್ರದ ಜನರಿಗೆ ಅನುಕೂಲ ಆಗದಿದ್ದರೆ ನಾಳೆಯೇ ರಾಜೀನಾಮೆ ನೀಡುವೆ. ನಾಡಿದ್ದು ರಾಜಕೀಯದಿಂದಲೇ ನಿವೃತ್ತಿಯಾಗುವೆ ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತ ವಿರುದ್ಧವೂ ಆಕ್ರೋಶ ಹೊರಹಾಕಿದ ಶಾಸಕ ಯಶವಂತರಾಯಗೌಡ ಪಾಟೀಲ್, ಬರ ಮಧ್ಯೆ ಇಂಡಿ ಕ್ಷೇತ್ರದ ಕಟ್ಟ ಕಡೆಯ ಹಳ್ಳಿಗಳಿಗೆ ಕಾಲುವೆ ನೀರು ಬಂದಿಲ್ಲ. ತಮ್ಮ ಕ್ಷೇತ್ರ ಕಟ್ಟ ಕಡೆಯ ರೈತರಿಗೆ ನೀರು ಸಿಗುತ್ತಿಲ್ಲ. ನನ್ನ ಕ್ಷೇತ್ರದ ಜನರಿಗೆ ನೀರು ಸಿಗದೆ ಹೋದರೆ ಯಾವ ಹಂತಕ್ಕೆ ಹೋಗಲು ಸಿದ್ಧ. ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ, ಇಂಡಿ ಶಾಖಾ ಕಾಲುವೆ ಮೂಲಕ ನೀರು ಹರಿಯಬೇಕಿದೆ. ಆದರೆ 22 ವರ್ಷದಿಂದ ಇಂಡಿ ಕ್ಷೇತ್ರದ ಕಾಲುವೆಗಳಿಗೆ ನೀರು ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಮ್ಮ ಕ್ಷೇತ್ರ ಕಟ್ಟ ಕಡೆಯ ರೈತರಿಗೆ ನೀರು ಸಿಗುತ್ತಿಲ್ಲ. ನನ್ನ ಕ್ಷೇತ್ರದ ಜನರಿಗೆ ನೀರು ಸಿಗದೆ ಹೋದರೆ ಯಾವ ಹಂತಕ್ಕೆ ಹೋಗಲು ಸಿದ್ಧ . ನೀರು ಬರದೆ ಹೋದರೆ ನಾನು ಯಾರಿಗೂ ಕೇರ್ ಮಾಡುವುದಿಲ್ಲ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಇಂಡಿ ಕ್ಷೇತ್ರ. ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ, ಇಂಡಿ ಶಾಖಾ ಕಾಲುವೆ ಮೂಲಕ ನೀರು ಹರಿಯಬೇಕಿದೆ. ಆದ್ರೆ, 22 ವರ್ಷದಿಂದ ಇಂಡಿ ಕ್ಷೇತ್ರದ ಕಾಲುವೆಗಳಿಗೆ ನೀರು ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪಕ್ಷದ ಬದ್ಧತೆ ಇದೆ, ಕಾಂಗ್ರೆಸ್ ಪಕ್ಷದಿಂದಲೇ ರಾಜಕಾರಣ ಮಾಡಿದ್ದೇನೆ, ಇಲ್ಲೆ ನಿವೃತ್ತಿ ಆಗುವೆ. ಜನರಿಗೆ ಅನಕೂಲ ಆಗದಿದ್ದರೆ ನಾಳೆಯೇ ರಾಜೀನಾಮೆ ನೀಡುವೆ. ನಾಡಿದ್ದೆ ನಿವೃತ್ತಿಯಾಗುವೆ. ಜನರಿಗೆ ನೀರು ಬರದಿದ್ದರೆ ಯಾವ ಪುರುಷಾರ್ಥಕ್ಕೆ ರಾಜಕಾರಣ ಮಾಡಬೇಕು. ಜನರ ಸಮಸ್ಯೆಯನ್ನು ನೇರವಾಗಿ ಎದೆಗಾರಿಕೆಯಿಂದ ಹೇಳುವೆ ಎಂದು ಕಡ್ಡಿ ಮುರಿದಂತೆ ಹೇಳಿದರು.

 

Related posts

ಡಾ. ಬಾಬು ಜಗಜೀವನ್ ರಾಮ್ ಸಭಾಂಗಣ ಉದ್ಘಾಟನೆ.

 ಅಗರಬತ್ತಿ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ: 7 ಬೈಕ್ ಗಳು ಸುಟ್ಟು ಭಸ್ಮ

ಜೆಡಿಎಸ್-ಬಿಜೆಪಿ  ಮೈತ್ರಿ  ಬಗ್ಗೆ ದೆಹಲಿಯಲ್ಲೇ ಚರ್ಚೆಯಾಯಿತೇ..? -ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೊಟ್ಟ ಸ್ಪಷ್ಟನೆ ಏನು..?