ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

‘ಮನೆ ಬಾಗಿಲಿಗೆ ವೈದ್ಯರು’: ಶೀಘ್ರದಲ್ಲೇ ಗ್ಯಾರಂಟಿ ಮಾದರಿಯಲ್ಲಿ ಗೃಹ ಆರೋಗ್ಯ ಹೊಸ ಯೋಜನೆ..

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ ಮೂರು ಯೋಜನೆಗಳನ್ನ ಜಾರಿಗೊಳಿಸಿದ್ದು, ಉಳಿದ ಎರಡು ಯೋಜನೆಗಳು ಜಾರಿಗೊಳ್ಳಬೇಕಿದೆ. ಈ ಮಧ್ಯೆ ಗ್ಯಾರಂಟಿ ಯೋಜನೆಗಳ ಮಾದರಿಯಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ.

ಪ್ರತಿಯೊಬ್ಬರ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸಲಾಗುವುದು. ಆಯ್ದ ಸಮಸ್ಯೆಗಳಿಗೆ ಉಚಿತವಾಗಿ ಔಷಧಿ ಒದಗಿಸುವ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಸರ್ಕಾರ  ಸಿದ್ಧತೆ ಮಾಡಿಕೊಳ್ಳುತ್ತಿದೆ. ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಇದನ್ನು ಜಾರಿಗೊಳಿಸಲಿದ್ದು, ನಂತರ ಉಳಿದ ಜಿಲ್ಲೆಗಳಲ್ಲಿಯೂ ವಿಸ್ತರಿಸಲಾಗುತ್ತದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಯೋಜನೆ ರೂಪಿಸಲಾಗಿದೆ. ಸಮಸ್ಯೆ ಉಲ್ಬಣಿಸಿದ ನಂತರ ಚಿಕಿತ್ಸೆ ನೀಡುವ ಬದಲಿಗೆ ರೋಗ ಕಾಣಿಸಿಕೊಳ್ಳುವ ಪೂರ್ವದಲ್ಲೇ ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ಉದ್ದೇಶ ಹೊಂದಲಾಗಿದೆ.

ಗೃಹ ಆರೋಗ್ಯ ಯೋಜನೆ ಅಡಿ ಆರೋಗ್ಯ ಸಿಬ್ಬಂದಿ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಎಲ್ಲಾ ಕುಟುಂಬ ಸದಸ್ಯರನ್ನು ತಪಾಸಣೆ ನಡೆಸಲಿದ್ದಾರೆ. ಬಿಪಿ, ಮಧುಮೇಹ ಸೇರಿದಂತೆ ಸಣ್ಣಪುಟ್ಟ ಕಾಯಿಲೆಗಳಿಗೆ ಸ್ಥಳದಲ್ಲೇ ಔಷಧ ನೀಡಲಿದ್ದು, ಸಂಕೀರ್ಣ ಕಾಯ್ದೆಗಳನ್ನು ಪತ್ತೆ ಹಚ್ಚಿ ಗಂಭೀರ ಸಮಸ್ಯೆ ಇದ್ದವರೆನ್ನು ಗುರುತಿಸಿ ಸೂಕ್ತ ಚಿಕಿತ್ಸೆಗೆ ಶಿಫಾರಸು ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‘

 

Related posts

ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ:  ಸಿಎಂ ಸಿದ್ದರಾಮಯ್ಯಗೆ ಶಿಫಾರಸು-  ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಲಿ ಎಂದು ಹೆಚ್.ಸಿ. ಯೋಗೇಶ್ ನೇತೃತ್ವದಲ್ಲಿ ವಿಶೇಷ ಪೂಜೆ

ಶಿಕ್ಷಣ ವ್ಯಕ್ತಿತ್ವ ನಿರ್ಮಾಣದ ಜತೆ ಸಂಯಮ ವೃದ್ಧಿ-ಕೆ.ಗಂಗಪ್ಪಗೌಡ