ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಅನಿವಾಸಿ ಭಾರತೀಯ ಕೋಶ ಉಪಾಧ್ಯಕ್ಷರಾಗಿ ಡಾ. ಆರತಿ ಕೃಷ್ಣ ನೇಮಕ

ಬೆಂಗಳೂರು: ಡಾ. ಆರತಿ ಕೃಷ್ಣ ಅವರನ್ನು ಅನಿವಾಸಿ ಭಾರತೀಯ ಕೋಶದ  ಉಪಾಧ್ಯಕ್ಷರಾಗಿ  ಅವರನ್ನ ನೇಮಕ ಮಾಡಲಾಗಿದೆ.

ಇವರನ್ನ  ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕರ್ನಾಟಕದ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವರೂ ಆಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಬೇಗಾನೆ ರಾಮಯ್ಯ ಅವರ ಪುತ್ರಿಯಾಗಿರುವ ಡಾ. ಆರತಿ ಕೃಷ್ಣ ಅವರು ಕಾಂಗ್ರೆಸ್ ಪಕ್ಷದೊಂದಿಗೆ ದೀರ್ಘಕಾಲ ಸಂಬಂಧ ಹೊಂದಿದ್ದಾರೆ. ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಎನ್‌ಆರ್‌ಐ ಸೆಲ್‌ ನ ಮೊದಲ ಅಧ್ಯಕ್ಷರಾಗಿದ್ದರು.

ಡಾ.ಆರತಿಕೃಷ್ಣ ಇವರಿಗೆ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

ಅಭಿನಂದನೆ:

ಇವರ ಈ ನೇಮಕ್ಕಾಗಿ ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಡಾ.ಆರ್.ಎಂ.ಮಂಜುನಾಥಗೌಡ, ಶಿವಮೊಗ್ಗ  ಜಿಲ್ಲಾ ಕಾಂಗ್ರೆಸ್  ಸಮಿತಿ ಅಧ್ಯಕ್ಷ ಹೆಚ್ ಎಸ್ ಸುಂದರೇಶ್, ಜಿಲ್ಲಾ ಕಾಂಗ್ರೆಸ್ ವಕ್ರಾರ ಎಂ. ರಮೇಶ್ ಶೆಟ್ಟಿ, ಕುವೆಂಪು ವಿವಿ ಮಾಜಿ ಸಿಂಡಿಕೇಟ್ ಸದಸ್ಯರಾದ ಹಿರೇಮಗಳೂರು ಪುಟ್ಟಸ್ವಾಮಿ ಅಭಿನಂದಿಸಿದ್ದಾರೆ‌

 

Related posts

‘ಝೀ-ಸೋನಿ’ ವೀಲನಕ್ಕೆ ಕೂಡಿ ಬಂತು ಕಾಲ..

ವಾಹನ ಸವಾರರಿಗೆ ದೀಪಾವಳಿಗೂ ಮುನ್ನ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ..

ಭಾರತೀಯ ವಿದ್ಯಾ ಭವನದಲ್ಲಿ ‘ಗೊಂಬೆ ಹಬ್ಬ’