ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮನೋ ವೈದ್ಯರು ಮತ್ತು ಸಿಬ್ಬಂದಿಗಳ ಪಾತ್ರ ಮಹತ್ತರ-ಡಾ. ಚಂದ್ರಶೇಖರ್

ಶಿವಮೊಗ್ಗ: ಶ್ರಮದಿಂದ ಸಾಧನೆ ಸಾಧ್ಯ . ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮನೋ ವೈದ್ಯರು ಮತ್ತು ಸಿಬ್ಬಂದಿಗಳ ಪಾತ್ರ ಮಹತ್ತರವಾದುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್ ಹೇಳಿದ್ದಾರೆ.
ಅವರು ಇಂದು ನಗರದ ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಕಟೀಲು ಅಶೋಕ ಪೈ ಸ್ಮಾರಕ ಕಾಲೇಜು ಐಕ್ಯೂಎಸಿ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಕಾಲೇಜಿನ ಎಲ್ಲಾ ವೇದಿಕೆಗಳ ಸಮಾರೋಪ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ-2023 ಉದ್ಘಾಟಿಸಿ ಮಾತನಾಡಿದರು.
ಕಟೀಲು ಅಶೋಕ ಪೈ ಸ್ಮಾರಕ ಕಾಲೇಜು ಅನೇಕ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಂಡು ಮಾದರಿಯಾಗಿದೆ. ಡಾ. ಅಶೋಕ್ ಪೈ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದ್ದರು. ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಮಾಧ್ಯಮ ಹಾಗೂ ಚಲನಚಿತ್ರಗಳ ಮೂಲಕ ವಿಶ್ವದ ಗಮನ ಸೆಳೆದಿದ್ದರು. ಈಗ ಅವರ ಸಂಸ್ಥೆಯ ವಿದ್ಯಾರ್ಥಿಗಳು ಕೂಡ ಸಾಧನೆಯತ್ತ ಮುನ್ನುಗ್ಗುತ್ತಿದ್ದಾರೆ ಎಂದರು.
ಇಡೀ ಸಮಾಜ ವಿಶ್ರಾಂತಿ ತೆಗೆದುಕೊಳ್ಳುವಾಗ ವೈದ್ಯರು ಕೆಲಸ ಮಾಡುವ ಅನಿವಾರ್ಯತೆ ಇದೆ. ಕೊರೋನಾ ಸಂದರ್ಭದಲ್ಲಿ ಯಾರೂಕಲ್ಪನೆ ಮಾಡದ ರೀತಿಯಲ್ಲಿ ಆರೋಗ್ಯ ಸಮಸ್ಯೆ ಉಂಟಾದಾಗ ವೈದ್ಯರು ಹಗಲಿರುಳು ಶ್ರಮಿಸಿದ್ದಾರೆ. ಅಂತ್ಯಕ್ರಿಯೆಗೂ ಬರಬೇಡಿ ಎನ್ನುವ ಸ್ಥಿತಿ ಆ ಸಂದರ್ಭದಲ್ಲಿತ್ತು. ಆಗ ವೈದ್ಯರು ತಮ್ಮ ವೃತ್ತಿಪರತೆ ಮೆರೆದಿದ್ದಾರೆ. ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕು. ಎಲ್ಲಾ ಮಾನಸಿಕ ರೋಗಿಗಳಿಗೂ ನಿಮ್ಮ ಸೇವೆ ಲಭ್ಯವಾಗಬೇಕು. ನಾಲ್ಕು ಗೋಡೆ ಮಧ್ಯೆ ನಿಮ್ಮ ಸೇವೆ ಸೀಮಿತವಾಗಬಾರದು ಎಂದರು.
ನಾನಾ ತರಹದ ಒತ್ತಡಗಳು ಜೀವನದಲ್ಲಿ ಬರುತ್ತವೆ. ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಕೆಲವರು ದಾಸರಾಗುತ್ತಾರೆ. ಇದರಿಂದ ಅವರ ಇಡೀ ಕುಟುಂಬ ತೊಂದರೆಗೊಳಗಾಗುತ್ತದೆ. ಈ ಸಂದರ್ಭದಲ್ಲಿ ಮಾನಸಿಕ ತಜ್ಞರ ಸಲಹೆ ಅತಿ ಮುಖ್ಯ. ನೈತಿಕ ಧೈರ್ಯ ತುಂಬಿ ರೋಗಿ ಮತ್ತು ಅವರ ಕುಟುಂಬಕ್ಕೆ ಸೂಕ್ತ ಸಲಹೆಯನ್ನು ಮಾನಸಿಕ ತಜ್ಞರು ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್. ಉಮೇಶ್ ಹಲವು ವಿಭಾಗಗಳಲ್ಲಿ ಸಾಧನೆ ಮಾಡಿದವರಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು.
ಮಾನಸ ಟ್ರಸ್ಟ್‍ನ ನಿರ್ದೇಶಕರಾದ ಡಾ. ರಜನಿ ಪೈ, ಟ್ರಸ್ಟ್‍ನ ಶೈಕ್ಷಣಿಕ ನಿರ್ದೇಶಕಿ ಡಾ. ಪ್ರೀತಿ ವಿ. ಶಾನಭಾಗ್, ಪ್ರೊ. ರಾಜೇಂದ್ರ ಚೆನ್ನಿ, ಪ್ರಾಂಶುಪಾಲೆ ಡಾ. ಸಂಧ್ಯಾ ಕಾವೇರಿ, ಡಾ. ಸುಕೀರ್ತಿ, ರಾಬರ್ಟ್ ರಾಯಪ್ಪ, ಮಂಜುನಾಥ ಸ್ವಾಮಿ ಮತ್ತಿತರರಿದ್ದರು.

Related posts

25ನೇ ವರ್ಷ ಪೂರೈಸಿದ ಸರ್ಚ್ ಇಂಜಿನ್ ದೈತ್ಯ ಗೂಗಲ್

ತಮಿಳುನಾಡಿಗೆ ನೀರು  ಹರಿಸಿ ಎಂದ ಸುಪ್ರೀಂಕೋರ್ಟ್ ತೀರ್ಪು ಗಾಯದ ಮೇಲೆ ಬರೆ ಎಳೆದಂತೆ- ಮಾಜಿ ಸಚಿವ ಸಿ.ಟಿ ರವಿ

ದಪ್ಪವಾಗಿದ್ದೇ ಜೀವನಕ್ಕೆ ಮುಳುವಾಯ್ತೆ..? ಹಾಸ್ಟೆಲ್ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.