ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ.

ಶಿವಮೊಗ್ಗ :  ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದ್ದು, ಸಾರ್ವಜನಿಕರು ceo.karnataka/gov.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಉಪಸ್ಥಿತಿಯಲ್ಲಿ ಮತದಾರರ ಪಟ್ಟಿ ನೋಂದಣಿ ಮತ್ತು ಪರಿಷ್ಕರಣೆ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯ ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಮತ್ತು ಶಿಕ್ಷಕರ ತಾತ್ಕಾಲಿಕ ಮತ್ತು ಸಾಮಾನ್ಯ ಹುದ್ದೆಗಳಿಗೆ 2023ರ ನವೆಂಬರ್ 01ನ್ನು ಅರ್ಹತಾ ದಿನಾಂಕವಾಗಿ ಉಲ್ಲೇಖಿಸಿ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸುವ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ. ಪ್ರಸ್ತುತ ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರದ ಆಯನೂರು ಮಂಜುನಾಥ ಅವರ ರಾಜೀನಾಮೆಯಿಂದ ತೆರವಾದ ಸ್ಥಾನ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಎಸ್.ಎಲ್.ಭೋಜೇಗೌಡ ಅವರ ಅವಧಿ ಪೂರ್ಣಗೊಳ್ಳಲಿದೆ.
ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರಕ್ಕೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕುಗಳು ಸೇರಿದಂತೆ ಶಿವಮೊಗ್ಗ ಜಿಲ್ಲೆ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳು ವ್ಯಾಪ್ತಿಗೊಳಪಡಲಿವೆ. ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕುಗಳು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳು ವ್ಯಾಪ್ತಿಗೊಳಪಡಲಿವೆ ಎಂದರು.
ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು, ಕೈಬಿಡಲು, ತಿದ್ದುಪಡಿ ಮಾಡಲು ಹಾಗೂ ಸ್ಥಳಾಂತರಿಸಲು ಈವರೆಗೆ ಸ್ವೀಕರಿಸಲಾದ ಅರ್ಜಿಗಳ ಕರಡು ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಅರ್ಜಿದಾರರು ಹಾಗೂ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸಿದ ಅರ್ಜಿದಾರರು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಆಕ್ಷೇಪಣೆಗಳಿದ್ದಲ್ಲಿ 2023ರ ಡಿಸೆಂಬರ್ 09ರೊಳಗಾಗಿ ಸಲ್ಲಿಸಬಹುದಾಗಿದೆ. ಅರ್ಹ ಶಿಕ್ಷಕರು ಮತ್ತು ಪದವೀಧರ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ನಮೂನೆ-18 ಮತ್ತು 19ರಲ್ಲಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿಯ ಅಂತಿಮ ಪ್ರಕಟಣೆಯನ್ನು 2023ರ ಡಿಸೆಂಬರ್ 30ರಂದು ಪ್ರಕಟಿಸಲಾಗುವುದು ಎಂದರು.
ಈ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಯೋಗವು ಚುನಾವಣಾ ನೋಂದಣಿ ಅಧಿಕಾರಿಗಳು, ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳನ್ನು ನೇಮಿಸಲಾಗಿದೆ.
ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ವ್ಯಾಪ್ತಿಯಲ್ಲಿ ಈವರೆಗೆ 66,982ಅರ್ಜಿಗಳು ಸ್ವೀಕಾರಗೊಂಡಿದ್ದು, ದಾಖಲಾತಿಗಳು ಸರಿಯಾಗಿದ್ದ 65,566ಅರ್ಜಿಗಳನ್ನು ಮಾನ್ಯ ಮಾಡಲಾಗಿದೆ. ಉಳಿದ 1,416ಅರ್ಜಿಗಳನ್ನು ವಿವಿಧ ಕಾರಣಗಳಿಗಾಗಿ ತಿರಸ್ಕøತಗೊಳಿಸಲಾಗಿದೆ. 33,964ಪುರುಷರು, 31,600ಸ್ತ್ರೀಯರು, 02 ಇತರರು ಸೇರಿದಂತೆ ಒಟ್ಟು, 65,566 ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.
ಶಿಕ್ಷಕರ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕ್ಷೇತ್ರದ ವ್ಯಾಪ್ತಿಯಲ್ಲಿ 17,402 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆ ಪೈಕಿ 16,950 ಸ್ವೀಕಾರಗೊಂಡಿದ್ದು, 452ಅರ್ಜಿಗಳನ್ನು ವಿವಿಧ ಕಾರಣಗಳಿಗಾಗಿ ತಿರಸ್ಕøತಗೊಳಿಸಲಾಗಿದೆ. ಮತದಾರರ ಪಟ್ಟಿಯಲ್ಲಿ 7,833ಪುರುಷರು, 9,117ಸ್ತ್ರೀಯರು ಸೇರಿದಂತೆ ಅರ್ಹರಾದ ಒಟ್ಟು 16,950ಅರ್ಜಿದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಚುನಾವಣಾ ತಹಶೀಲ್ದಾರ್ ಮಂಜುನಾಥ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

Related posts

ಹುಲಿ ಉಗುರು ಸಂಕಷ್ಟ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿವಾಸದಲ್ಲಿ ಅರಣ್ಯಾಧಿಕಾರಿಗಳಿಂದ ಪರಿಶೀಲನೆ.

ಕ್ರೀಡೆಯಿಂದ ಶಿಸ್ತು, ಏಕಾಗ್ರತೆ  ಬೆಳೆಯುವುದು-ಚನ್ನಪ್ಪ

ನ.08 ರಂದು ಕಸಾಪ ವತಿಯಿಂದ ದತ್ತಿ ಉಪನ್ಯಾಸ.