ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್.: ತುಟ್ಟಿಭತ್ಯೆ ಶೇ 3.75 ರಷ್ಟು ಹೆಚ್ಚಳ..

ಬೆಂಗಳೂರು:  ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.  ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ ನೀಡಿದೆ.

UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು 4 ಶೇ. ದಷ್ಟು ಹೆಚ್ಚಿಸಿ ಸಿಹಿ ಸುದ್ದಿ ನೀಡಿತ್ತು. ಅ. 18ರಂದು ಕೇಂದ್ರ ಸರ್ಕಾರ ಈ ಘೋಷಣೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ತನ್ನ ನೌಕರರ ಡಿಎಯನ್ನು 3.75 ಶೇ. ಹೆಚ್ಚಿಸಿ ಹಬ್ಬಕ್ಕೆ ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರ ಡಿಎ ಹೆಚ್ಚಿಸಿದ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಡಿಎ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು.

ಇದೀಗ ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ಹಬ್ಬದ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.3.75ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

 

Related posts

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ  ಎರಡು ದಿನ ಜಿ20  ಶೃಂಗಸಭೆ: ವಿಶ್ವ ಅಗ್ರ ರಾಷ್ಟ್ರಗಳ ನಾಯಕರು ಭಾಗಿ.

ಹಿಂದುಳಿದ ವರ್ಗಗಳಿಗೆ ಶೇ.33ರಷ್ಟು ಮೀಸಲಾತಿ ಶಿಫಾರಸ್ಸಿಗೆ ಸರ್ಕಾರ ಒಪ್ಪಿಗೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡದಂತೆ ಆಗ್ರಹ: ರಸ್ತೆ ತಡೆದು ಪ್ರತಿಭಟನೆ.