ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಎಸ್ ಎಸ್ ಎಲ್ ಸಿ ಮತ್ತು ಪಿಯು ಪರೀಕ್ಷೆ: ಫೇಲ್ ಆದ ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ಅವಕಾಶ- ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು:  ಫೇಲ್​ ಆದ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಇನ್ಮುಂದೆ  ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಬಹುದು. ಹೌದು, ಎಸ್ ಎಸ್ ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಫೇಲ್​​​ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದು.  ವರ್ಷದಲ್ಲಿ ಇನ್ಮುಂದೆ ಕಲಿಕಾ ಚೇತರಿಕೆಯ ಕಾರಣದಿಂದಾಗಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಘೋಷಣೆ ಮಾಡಿದರು.

ಹತ್ತನೆ ತರಗತಿಯಲ್ಲಿ ಮೂರು ಬಾರಿ ತೆಗೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಮಕ್ಕಳಿಗೆ ಒಂದು ವರ್ಷ ವ್ಯರ್ಥ ಆಗಬಾರದು ಎಂದು ವರ್ಷದಲ್ಲಿ ಮೂರು ಬಾರಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವಂತಹ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Related posts

ಶಿವಮೊಗ್ಗ ಅಭಿವೃದ್ಧಿಗೆ ಆದ್ಯತೆ ನೀಡಲು ಸಚಿವ ಮಧು ಬಂಗಾರಪ್ಪ ಅವರಿಗೆ  ಮನವಿ.

ನ.೨೫  ಮುಡುಬಾದಲ್ಲಿ ಸಾಹಿತ್ಯ ಹುಣ್ಣಿಮೆ ಸಂಭ್ರಮ

ಕಾವೇರಿ ಜಲ ವಿವಾದ: ಮಂಗಳ ವಾರದ  ಬೆಂಗಳೂರು ಬಂದ್ ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಬಲ