ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭಕ್ಕೆ ಕ್ರಮ- ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ: ಮುಂದಿನ ದಿನಗಳಲ್ಲಿ ಸರ್ಕಾರ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಸಚಿವ ಮಧುಬಂಗಾರಪ್ಪ, ರಾಜ್ಯದಲ್ಲಿ 15 ಕ್ಕಿಂತ ಕಡಿಮೆ ಮಕ್ಕಳು ಇರುವ ಸುಮಾರು 22 ಸಾವಿರ ಶಾಲಗಳಿವೆ.  ಕಡಿಮೆ ಮಕ್ಕಳಿರುವ ಶಾಲೆಗಳನ್ನು ಉತ್ತಮ ಶಾಲೆಗಳೊಂದಿಗೆ ಸೇರಿಸಲಾಗುತ್ತದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಎಲ್ಲೆಲ್ಲಿ ಎನ್ ಇಪಿ ಜಾರಿಯಾಗಿದೆಯೋ ಅಲ್ಲೆಲ್ಲ ಹಂತ ಹಂತವಾಗಿ ಮಕ್ಕಳಿಗೆ ತೊಂದರೆಯಾಗಿದೆ. ಅದರ ಬದಲಾಗಿ ಜನರ ಅಪಕ್ಷೇಯಂತೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.

Related posts

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ  ಎರಡು ದಿನ ಜಿ20  ಶೃಂಗಸಭೆ: ವಿಶ್ವ ಅಗ್ರ ರಾಷ್ಟ್ರಗಳ ನಾಯಕರು ಭಾಗಿ.

ಇಸ್ರೋದ ಗಗನಯಾನ ನೌಕೆ ಸುರಕ್ಷತಾ ಪ್ರಯೋಗ ಯಶಸ್ವಿ.

ಎನ್ ಡಿಎಗೆ ಜೆಡಿಎಸ್ ಸೇರ್ಪಡೆ ದೊಡ್ಡ ಶಕ್ತಿ  ಬಂದಂತಾಗಿದೆ-ಮಾಜಿ ಸಿಎಂ ಬಿಎಸ್ ವೈ