ಮಂಡ್ಯ: ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ / ಬಾಳೆಹಣ್ಣು , ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಚಾಲನೆ ನೀಡಿದರು.
ಶಾಲಾ ಮಕ್ಕಳ ಜೊತೆಯಲ್ಲೇ ಕುಳಿತು ಊಟ ಮಾಡುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸರಳತೆಯನ್ನ ಪ್ರದರ್ಶಿಸಿದರು. ಈ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸಹ ಸಾಥ್ ನೀಡಿದರು.