ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶಾಲಾ ಮಕ್ಕಳನ್ನು ಮ್ಯಾನೇಜ್ ಮೆಂಟ್ ಸೇವೆಗಳಿಗೆ ಬಳಸಿದ್ರೆ ಕಠಿಣ ಕ್ರಮ- ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ.

ಬೆಂಗಳೂರು: ಶಾಲಾ ಮಕ್ಕಳನ್ನು ಮ್ಯಾನೇಜ್ಮೆಂಟ್ ಸೇವೆಗಳಿಗೆ ಬಳಸುವಂತಿಲ್ಲ. ಮಕ್ಕಳಿಂದ ಶಾಲೆಗಳಲ್ಲಿ ಬೇರೆ ಕೆಲಸ ಮಾಡಿಸುವಂತಿಲ್ಲ. ಅನ್ಯಕೆಲಸಗಳಿಗೆ ಮಕ್ಕಳನ್ನ ಬಳಸಿದರೇ ಕಠಿಣ ಕ್ರಮ ಕೈಗೊಳ್ಳಲಾಗುವುದು  ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಖಾಸಗಿ ಶಾಲೆಗಳು ಪ್ರತಿವರ್ಷ ಆಗ್ನಿ ಶಾಮಕ ದಳದಿಂದ ಅನುಮತಿ ನವೀಕರಣ ಮಾಡಿಕೊಳ್ಳಬೇಕು ಎಂಬ ನಿಯಮವನ್ನು ಸಡಿಲಿಸಲು ಸಾಧ್ಯವಿಲ್ಲ.  ನಮಗೆ ಮಕ್ಕಳ ಸುರಕ್ಷೆ ಮುಖ್ಯ. ಅದೇ ರೀತಿ ಶಾಲಾ ಮಕ್ಕಳನ್ನು ಮ್ಯಾನೇಜ್ಮೆಂಟ್ನ ಸೇವೆಗಳಿಗೆ ಬಳಸಿದರೆ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಗಿಡ ನೆಡುವುದು ಮುಂತಾದ ಕಲಿಕೆಯ ಉದ್ದೇಶದ ಕೆಲಸಗಳಿಗೆ ವಿನಾಯಿತಿ ಇದೆ ಎಂದು ತಿಳಿಸಿದರು.

ರಾಜ್ಯವ್ಯಾಪಿ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರಕಾರದ ಕರ್ತವ್ಯವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮ ಜರುಗಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ರಾಜ್ಯಾದ್ಯಂತ 26 ಶಾಲೆಗಳು ನೋಂದಣಿಯನ್ನೇ ಮಾಡಿಲ್ಲ, ಅನುಮತಿ ಪಡೆಯದೆ ಉನ್ನತೀಕರಿಸಿರುವ ಶಾಲೆಗಳು 76, ಇತರ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳು 143, ಅನುಮತಿ ಪಡೆಯದೆ ಹೆಚ್ಚುವರಿ ವಿಭಾಗಗಳನ್ನು ಪಡೆದಿರುವ 631, ಅನುಮತಿ ಪಡೆಯದೆ ಸ್ಥಳಾಂತರಿಸಿರುವ 190, ಅನುಮತಿ ಪಡೆಯದೆ ಹಸ್ತಾಂತರ ಮಾಡಿರುವ 15, ಒಂದೇ ಕಟ್ಟಡದಲ್ಲಿ ಕೇಂದ್ರ ಮತ್ತು ರಾಜ್ಯ ಪಠ್ಯಕ್ರಮ ಬೋಧಿಸುತ್ತಿರುವ ಶಾಲೆಗಳು 495 ಇವೆ ಎಂದು ಸಚಿವರು ಮಾಹಿತಿ ನೀಡಿದರು.

ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಮುಂದಾಗುವಂತೆ ಆಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

 

Related posts

ಹೊಯ್ಸಳ ದೇವಾಲಯಗಳು ಯುನೆಸ್ಕೋ ವಿಶ್ವಪರಂಪರೆ ಪಟ್ಟಿಗೆ ಸೇರ್ಪಡೆ: ಸಿಎಂ ಸಂತಸ

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ದೇವರು ಒಳ್ಳೆಯದು ಮಾಡಲಿ-ಸಚಿವ ಮಧು ಬಂಗಾರಪ್ಪ

ಅನ್ನಭಾಗ್ಯ ಯೋಜನೆಯಲ್ಲಿ ಆಹಾರ ಇಲಾಖೆಯಿಂದ ಹೊಸ ಪ್ಲಾನ್.