ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ರಾಜಸ್ತಾನದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಚುನಾವಣಾ ಸಮೀಕ್ಷೆಯಲ್ಲಿ ಬಹಿರಂಗ.

ಜೈಪುರ: ಈಗಾಗಲೇ ಕರ್ನಾಟಕದಲ್ಲಿ ಬಹುಮತ ಪಡೆದು ಆಡಳಿತದಲ್ಲಿರುವ ಕಾಂಗ್ರೆಸ್ ಇದೀಗ ಮುಂದಿನ ಗುರಿ ಹಾಲಿ ಅಧಿಕಾರದಲ್ಲಿರುವ ರಾಜಸ್ತಾನದ ಕಡೆ. ಹೌದು,  ಈ ವರ್ಷದ ಅಂತ್ಯದೊಳಗೆ ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳಲ್ಲಿ ರಾಜಸ್ಥಾನ ಸಹ ಒಂದು. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಮುಂದೆಯೂ ಅಧಿಕಾರಕ್ಕೇರಲು ಕಾಂಗ್ರೆಸ್ ತಯಾರಿ ನಡೆಸುತ್ತಿದೆ.  2024ರ ಲೋಕಸಭೆ ಚುನಾವಣೆಗೂ ಮುನ್ನ ಇಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.

ಈ ವರ್ಷದ ಅಂತ್ಯಕ್ಕೆ ನಡೆಯಲಿರುವ ರಾಜಸ್ಥಾನ ವಿಧಾನಸಭೆ (200 ಕ್ಷೇತ್ರಗಳು) ಚುನಾವಣೆ ಬಗ್ಗೆ SmallBoxIndia ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಮತ್ತೆ ರಾಜಸ್ತಾನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ.

ಜುಲೈ 22 ರಿಂದ ಆಗಸ್ಟ್ 24ರ ತನಕ 23,000 ಮಾದರಿಗಳ ಮೂಲಕ ಈ ಸಮೀಕ್ಷೆ ನಡೆಸಲಾಗಿದೆ ಎಂದು ಹೇಳಿದೆ. SmallBoxIndia ಚುನಾವಣಾ ಪೂರ್ವ ಸಮೀಕ್ಷೆ ವರದಿಯನ್ನು ಬಿಡುಗಡೆ ಮಾಡಿದೆ. ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ. ವರದಿಯ ಪ್ರಕಾರ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷ 102-108 ಸೀಟುಗಳಲ್ಲಿ ಗೆಲುವು ಸಾಧಿಸಲಿದೆ.                 ಸಮೀಕ್ಷೆಯ ವರದಿ SmallBoxIndia ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಈಗ ರಾಜಸ್ಥಾನ ವಿಧಾನಸಭೆಗೆ ಚುನಾವಣೆ ನಡೆದರೆ ಕಾಂಗ್ರೆಸ್ 102-108, ಬಿಜೆಪಿ 78-84 ಮತ್ತು ಇತರರು 6-8 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ ಎನ್ನಲಾಗಿದೆ.

ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿದೆ. ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆಯೂ ಸಹ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರ ಪಡೆಯಲಿದೆ ಎಂದು ಅಂದಾಜಿಸಿದೆ.

ರಾಜಸ್ಥಾನ ವಿಧಾನಸಭೆ ಚುನಾವಣೆ 2023ಕ್ಕೆ ಬಿಜೆಪಿ ಎರಡು ಸಮಿತಿಗಳನ್ನು ಈಗಾಗಲೇ ರಚನೆ ಮಾಡಿದೆ. ಚುನಾವಣಾ ನಿರ್ವಹಣಾ ಸಮಿತಿ ಮತ್ತು ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚನೆ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ನಿರೀಕ್ಷೆ ಮಾಡಲಾಗಿದೆ.

 

Related posts

ವ್ಯಾಪಾರ ನಡೆಸಲು ಕಾರ್ಮಿಕರ ಲೈಸೆನ್ಸ್ ಕಡ್ಡಾಯ

 ಲಾರಿ ಮತ್ತು ಟಾಟಾ ಸುಮೊ ನಡುವೆ ಭೀಕರ ಅಪಘಾತ: 12 ಮಂದಿ ದುರ್ಮರಣ.

ವಿಜಯದಶಮಿಯ ಬನ್ನಿ ಮುಡಿಯುವ ಕಾರ್ಯಕ್ರಮ: ವೇದಿಕೆ ನಿರ್ಮಾಣಕ್ಕೆ ಗುದ್ದಲಿಪೂಜೆ..