ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸ್ವಾಮೀಜಿ ಬಂಧನವಾಗಲಿ ಎಲ್ಲ ಸತ್ಯ ಹೊರಗೆ ಬರುತ್ತೆ-   ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಚೈತ್ರ ಕುಂದಾಪುರ

ಬೆಂಗಳೂರು: ಎಂಎಲ್ಎ  ಬಿಜೆಪಿ ಟಿಕೆಟ್ ಕೊಡಿಸುವುದಾಗಿ  ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತವಾಗಿರುವ ಚೈತ್ರ ಕುಂದಾಪುರ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.

ಸಿಸಿಬಿ ಕಚೇರಿ ಮುಂದೆ ಪೊಲೀಸ್​ ವಾಹನದಿಂದ ಕೆಳಗಡೆ ಇಳಿಯುತ್ತಿದ್ದಂತೆ ಮಾಧ್ಯಮಗಳಿಗೆ  ಕ್ಯಾಮೆರಾ ಮುಂದೆ ಮಾತನಾಡಿದ ಚೈತ್ರಾ ಕುಂದಾಪುರ, ಸ್ವಾಮೀಜಿ ಬಂಧನವಾಗಲಿ ಆಗ ಎಲ್ಲ ಸತ್ಯ ಹೊರಗಡೆ ಬರುತ್ತದೆ. ಇದರಲ್ಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್​ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಮಾಹಿತಿ ಬಿಚ್ಚಿಟ್ಟಿದ್ದಾರೆ

ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಹೇಳಿ ಚೈತ್ರ ಕುಂದಾಪುರ 7 ಕೋಟಿ ರೂ ವಂಚಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಗಗನ್ ಕಡೂರು, ಮೋಹನ್ ಕುಮಾರ್ ಅಲಿಯಾಸ್ ರಮೇಶ್​ ಮತ್ತು ಗ್ಯಾಂಗ್ ಜತೆ ಸೇರಿಕೊಂಡು ಉದ್ಯಮಿ ಬಳಿಯಿಂದ ಬರೋಬ್ಬರಿ 7  ಪಡೆದು ವಂಚಿಸಿದ್ದಾರೆ ಎನ್ನಲಾಗಿದ್ದು, ಪ್ರಕರಣ ಸಂಬಂಧ ಚೈತ್ರ ಕುಂದಾಪುರರನ್ನ ಬಂಧಿಸಿದ್ಧ ಸಿಸಿಬಿ ಪೊಲೀಸರು ನಿನ್ನೆ ಕೋರ್ಟ್ ಗೆ ಹಾಜರುಪಡಿಸಿದ್ದರು. ನಂತರ ಕೋರ್ಟ್ ಚೈತ್ರಕುಂದಾಪುರರನ್ನ ಸಿಸಿಬಿ ಪೊಲೀಸರ ವಶಕ್ಕೆ ನೀಡಿದೆ.

Related posts

ಸೆ. 09: ಶಾಲಾ ಅಂಗಳದಲ್ಲಿ ಸಾಹಿತ್ಯ ಕಮ್ಮಟ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಕುವೆಂಪು ವಿ.ವಿ.ಯಲ್ಲಿ ಸಂವಿಧಾನ ಪೀಠಿಕೆ ಓದು.

ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ವೇತನಾನುದಾನಕ್ಕೆ ಸೇರಿಸಲು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ರಮೇಶ್ ಶೆಟ್ಟಿ ….