ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಚೀನಾ ನಮ್ಮ ಭೂಮಿಯನ್ನು ಕಸಿದುಕೊಂಡಿದೆ ಎಂದು ಲಡಾಖ್ ನ ಪ್ರತಿಯೊಬ್ಬರಿಗೂ ಗೊತ್ತು-ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಕಾರ್ಗಿಲ್: ಚೀನಾ ನಮ್ಮ ಭೂಮಿಯನ್ನು ಕಸಿದುಕೊಂಡಿದೆ ಎಂದು ಲಡಾಖ್ ನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತು. ಆದರೂ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಒಂದು ಇಂಚು ಭೂಮಿಯನ್ನು ವಶಪಡಿಸಿಕೊಂಡಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುಟುಕಿದರು.

ಒಂಬತ್ತು ದಿನಗಳ ಲಡಾಖ್ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಕೊನೆಯ ದಿನವಾದ ಇಂದು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು. “ಕಳೆದ ವಾರ ನಾನು ಮೋಟಾರ್ ಸೈಕಲ್ ನಲ್ಲಿ ಇಡೀ ಲಡಾಖ್ ಗೆ ಭೇಟಿ ನೀಡಿದ್ದೇನೆ. ಲಡಾಖ್ ಒಂದು ಆಯಕಟ್ಟಿನ ಸ್ಥಳವಾಗಿದೆ ಮತ್ತು ನಾನು ಪ್ಯಾಂಗಾಂಗ್ ಸರೋವರದಲ್ಲಿದ್ದಾಗ, ಚೀನಾ ಸಾವಿರಾರು ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟವಾಗಿ ತಿಳಿಯಿತು ಎಂದರು.

ನಮ್ಮ ಒಂದು ಇಂಚು ಭೂಮಿಯನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂದು ಪ್ರಧಾನಿ ಮೋದಿ ಹೇಳಿರುವುದು ಬೇಸರದ ಸಂಗತಿ. ಅವರ ಹೇಳಿಕೆ ಸಂಪೂರ್ಣ ಸುಳ್ಳು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಚೀನಾ ನಮ್ಮ ಭೂಮಿಯನ್ನು ಕಿತ್ತುಕೊಂಡಿದೆ ಎಂದು ಲಡಾಖ್ ನ ಪ್ರತಿಯೊಬ್ಬ ವ್ಯಕ್ತಿಗೂ ಗೊತ್ತಿದೆ.

ಆದರೆ ಪ್ರಧಾನಿ ಮೋದಿ ಸತ್ಯವನ್ನು ಮಾತನಾಡುತ್ತಿಲ್ಲ” ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಅವರು ಲಡಾಖ್ ಪ್ರವಾಸದ ಸಮಯದಲ್ಲೇ ಎರಡನೇ ಬಾರಿ ಚೀನಾದೊಂದಿಗಿನ ಗಡಿ ವಿವಾದವನ್ನು ಪ್ರಸ್ತಾಪಿಸಿದ್ದಾರೆ. ಲಡಾಖ್ನ ಒಂದು ಇಂಚು ಭೂಮಿಯನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂಬ ಮೋದಿ ಹೇಳಿಕೆ ಸುಳ್ಳು ಎಂದು ಕಳೆದ ಭಾನುವಾರ ಹೇಳಿದ್ದರು.

 

Related posts

ಕಾಂಗ್ರೆಸ್ ನಿಂದ ಗೆದ್ದು ಬೇರೆ ಪಕ್ಷದ ಪರ ಪ್ರಚಾರ ನಡೆಸಿದ್ನಾದ ಲ್ವರು ಪುರಸಭೆ ಸದಸ್ಯರ ಸದಸ್ಯತ್ವ ಅನರ್ಹ.

ಮೂತ್ರ ಸೋರುತ್ತಿದ್ದ ಮಹಿಳೆಗೆ ರೋಬೋಟಿಕ್ ಶಸ್ತ್ರಚಿಕಿತ್ಸೆ ಮೂಲಕ ಎನ್‍ಯು ಆಸ್ಪತ್ರೆಯ ವೈದ್ಯರ ಚಿಕಿತ್ಸೆ

ಕೇಂದ್ರ ಸರ್ಕಾರ ಕೂಡ ಜಾತಿಗಣತಿಯನ್ನು ನಡೆಸಬೇಕು-ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್ ಆಗ್ರಹ