ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಎನ್ ಇಪಿ ರದ್ದತಿಗೆ ರಾಜ್ಯ ಸರ್ಕಾರದ ಚಿಂತನೆ : ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್​ ಆಕ್ರೋಶ.

ಬೆಂಗಳೂರು:  ಎನ್ ಇಪಿ ರದ್ದು ಮಾಡಲು ನಿರ್ಧರಿಸಿರುವ ಕಾಂಗ್ರೆಸ್​ ಸರ್ಕಾರದ ವಿರುದ್ಧ ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಸಚಿವ ಬಿ.ಸಿ ನಾಗೇಶ್, ಬಹುತೇಕ ರಾಜಕಾರಣಿಗಳು, ಅಧಿಕಾರಿಗಳು ಶಾಲೆ ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿಸಬೇಕು ಅಂತಾ  ಷಡ್ಯಂತ್ರ ನಡೆಯುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಸ್​​.ಎಸ್​.ಮಲ್ಲಿಕಾರ್ಜುನ, ಎಂ.ಬಿ.ಪಾಟೀಲ್ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ದೊಡ್ಡ ಹುನ್ನಾರ ಮಾಡಿದೆ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಎನ್ ​ಇಪಿ ತೆಗೆದುಹಾಕುವ ಮೊದಲು ಜನರ ಮುಂದಿಡಲಿ ಅದರಲ್ಲಿ ಏನೆಲ್ಲ ಲೋಪದೋಷಗಳಿವೆ ಎಂದು ಬಹಿರಂಗಪಡಿಸಬೇಕು. ಖಾಸಗಿ ಸಂಸ್ಥೆಗಳ ಒತ್ತಡಕ್ಕೆ ಮಣಿದು ಈ ರೀತಿ ನಡೆದುಕೊಳ್ಳಬಾರದು ಎಂದು ಬಿಸಿ ನಾಗೇಶ್ ವಾಗ್ದಾಳಿ ನಡೆಸಿದರು.

Related posts

ದೀಪವಾಗಿ ಬೆಳಗಿ ಬೆಂಕಿಯಾಗಿ ಉರಿಯಬೇಡಿ- ವಿದ್ಯಾರ್ಥಿಗಳಿಗೆ ಪೊಲೀಸ್ ಪಡೆಯ ಕಮಾಡಂಟ್ ಎಸ್. ಯುವಕುಮಾರ್ ಕಿವಿಮಾತು

ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಐತಿಹಾಸಿಕ ತೀರ್ಮಾನ-ಸಂಸದ ಬಿ.ವೈ. ರಾಘವೇಂದ್ರ

ಡಿಕೆಶಿ ಮತ್ತೆ ಜೈಲಿಗೆ ಹೋಗ್ತಾರೆಂಬ ಹೆಚ್.ಡಿಕೆ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವ ಜಮೀರ್ ಅಹ್ಮದ್ ಖಾನ್