ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕನ್ನಡ ಸಾಹಿತ್ಯ ಪರಿಷತ್ತಿನ  ʻಕನ್ನಡ ಪ್ರವೇಶʼ, ʻಕಾವʼ, ʻಜಾಣʼ ʻರತ್ನʼ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ  ೨೦೨೩-೨೪ನೆಯ ಸಾಲಿನ ʻಕನ್ನಡ ಪ್ರವೇಶʼ, ʻಕಾವʼ, ʻಜಾಣʼ ʻರತ್ನʼ ಪರೀಕ್ಷೆಗಳಿಗೆ ಅರ್ಜಿಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ. .

 ಸಾರ್ವಜನಿಕರ ಒತ್ತಾಯದ ಹಿನ್ನೆಲೆಯಲ್ಲಿ ೨೦೨೩ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿರುವ ʻಕನ್ನಡ ಪ್ರವೇಶ, ಕಾವ, ಜಾಣ ರತ್ನ  ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.  ೨೦೨೩ರ ಅಕ್ಟೋಬರ್‌ ೩೧ರ ವರೆಗೆ ಅರ್ಜಿ ಸಲ್ಲಿಸಲು ಅವದಿ ವಿಸ್ತರಿಸಲಾಗಿದೆ. ಅವಧಿ ವಿಸ್ತರಣೆಯ ಸಂದರ್ಭದಲ್ಲಿ ದಂಡ ಶುಲ್ಕ ರೂ. ೫೦-೦೦ ಅನ್ನು ಹೆಚ್ಚುವರಿಯಾಗಿ ಪಾವತಿಸಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ* ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.

ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ೨೫ ರೂ. ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಇರುವ ಮಾರಾಟ ಮಳಿಗೆಯಲ್ಲಿ ಪಡೆಯಬಹುದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ತಾವು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸುವ ಸೌಲಭ್ಯವನ್ನು ಪರಿಷತ್ತು ಕಲ್ಪಿಸಿದೆ.

 ಅರ್ಜಿ ನಮೂನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದು ಕೊಳ್ಳಬಹುದು. ಅಂತರ್ಜಾಲದ ಮೂಲಕ ಅರ್ಜಿ ನಮೂನೆ ಪಡೆದವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ೨೫ ರೂ.ಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕಾಗುವುದು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು- ೫೬೦೦೧೮, ದೂರವಾಣಿ ಸಂಖ್ಯೆ : ೦೮೦-೨೬೬೧೨೯೯೧, ೨೨೪೨೩೮೬೭, ೨೬೬೨೩೫೮೪ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ.

Related posts

ಇಸ್ರೇಲ್-ಹಮಾಸ್ ಸಂಘರ್ಷ ಅಂತ್ಯಕ್ಕೆ ನೆರವಾಗಲು ರಷ್ಯಾ ಸಿದ್ಧ ಎಂದ ಪುಟಿನ್

ಮಂಡ್ಯದ ಆಲೆಮನೆ ಮಾತ್ರವಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲೂ ಭ್ರೂಣಲಿಂಗ ಪತ್ತೆ?

TOD News

ಏಕದಿನ ಏಷ್ಯಾಕಪ್ 2023: ಇಂಡೋ- ಪಾಕ್ ಕದನ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ.