ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರೈತರು ಬರ ಪರಿಹಾರ, ಇತರೇ ಸೌಲಭ್ಯ ಪಡೆಯಲು `FID’ ಕಡ್ಡಾಯ.

ಬೆಂಗಳೂರು : ರೈತರು ಬರ ಪರಿಹಾರ ಮತ್ತು ಇತರೇ ಸೌಲಭ್ಯ  ಪಡೆಯಲು ರೈತರ ಗುರುತಿನ ಸಂಖ್ಯೆ(FID) ಕಡ್ಡಾಯವಾಗಿದೆ.

ಬೆಳೆ ವಿಮೆ ನೋಂದಣಿಗೆ, ಕನಿಷ್ಟ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಮಾರಾಟ ಮಾಡಲು, ಬೆಳೆ ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ ಸೌಲಭ್ಯ ಪಡೆಯಲು ರೈತರ ಗುರುತಿನ ಸಂಖ್ಯೆ (ಎಫ್ಐಡಿ) ಕಡ್ಡಾಯವಾಗಿದೆ.

ಎಫ್ಐಡಿ ಮಾಡಿಸುವುದು ಹೇಗೆ…?

ಎಫ್ಐಡಿ ಮಾಡಿಸದ ರೈತರು ಕೂಡಲೇ ಕೃಷಿ ಅಥವಾ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ತಮ್ಮ ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ಮೊಬೈಲ್ ಸಂಖ್ಯೆಯೊಂದಿಗೆ ತೆರಳಿ ನೋಂದಣಿ ಮಾಡಿಸಿ ಎಫ್ಐಡಿ ಸಂಖ್ಯೆ ಪಡೆಯಬೇಕು.

ದಾಖಲಿಸಿದ ಜಮೀನಿನ ವಿಸ್ತೀರ್ಣಗಳಿಗೆ ಮಾತ್ರ ಸರ್ಕಾರದ ಪರಿಹಾರ ಸೌಲಭ್ಯ ದೊರೆಯುವುದರಿಂದ ರೈತ ಬಾಂಧವರು ತಾವು ಹೊಂದಿರುವ ಎಲ್ಲಾ ಜಮೀನಿನ ಸರ್ವೆ ನಂಬರ್ ನ ವಿಸ್ತೀರ್ಣಗಳನ್ನು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

Related posts

ಶಿವಮೊಗ್ಗ ಅಭಿವೃದ್ಧಿಗೆ ಆದ್ಯತೆ ನೀಡಲು ಸಚಿವ ಮಧು ಬಂಗಾರಪ್ಪ ಅವರಿಗೆ  ಮನವಿ.

ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ.

ಆದಿಚುಂಚನಗಿರಿ ಶ್ರೀಗಳಿಂದ ಶ್ರೀ ಸೋಮೇಶ್ವರ ಸ್ವಾಮಿಗೆ ಹೋಮ – ಹವನ”