ಕನ್ನಡಿಗರ ಪ್ರಜಾನುಡಿ
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ: ಪ್ರಕರಣ ದಾಖಲು.

ಶಿವಮೊಗ್ಗ: ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ ಮಾಡಲಾಗಿದೆ. ಪಟ್ಟಣದ ಮುಖ್ಯ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಾಂಧಿ ಪ್ರತಿಮೆಯನ್ನು ಹಾಳು ಮಾಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಗಾಂಧಿ ಪ್ರತಿಮೆಗೆ ಹಾನಿಗೊಳಿಸಿದ ಮಾಹಿತಿ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಹೊಳೆಹೊನ್ನೂರಿಗೆ ದೌಡಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಘಟನೆಯಿಂದಾಗಿ ಕೆಲಕಾಲ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಸ್ಥಳಕ್ಕ ಭೇಟಿ ನೀಡಿದ ಎಸ್‍ಪಿ ಮಿಥುನ್‍ಕುಮಾರ್ ಹಾಗೂ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿದೆ. ತನಿಖೆ ಮುಂದುವರಿದಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಪರಿಸ್ಥಿತಿ ತಿಳಿಯಾಗಿದೆ.
ಈ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಾಜ್ಯಗಳಿಗೆ ಜಾತಿಗಣತಿ ನಡೆಸುವ ಅಧಿಕಾರ ಇಲ್ಲ- ಕೇಂದ್ರ ಸರ್ಕಾರ

ತಮಿಳುನಾಡಿಗೆ ನೀರು  ಹರಿಸಿ ಎಂದ ಸುಪ್ರೀಂಕೋರ್ಟ್ ತೀರ್ಪು ಗಾಯದ ಮೇಲೆ ಬರೆ ಎಳೆದಂತೆ- ಮಾಜಿ ಸಚಿವ ಸಿ.ಟಿ ರವಿ

ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶವಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ- ಸಿಎಂ ಸಿದ್ದರಾಮಯ್ಯ ನುಡಿ