ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪಟಾಕಿ ದುರಂತ ಪ್ರಕರಣ: ನಾಲ್ವರು ಅಧಿಕಾರಿಗಳ ಅಮಾನತು

ಬೆಂಗಳೂರು:  ನಗರದ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ರಾಜ್ಯ ಸರ್ಕಾರ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಅತ್ತಿಬೆಲೆಯಲ್ಲಿ ಪಟಾಕಿ ಗೋಡೌನ್ ನಲ್ಲಿ ಅಗ್ನಿ ಅವಘಡ ಸಂಭವಿಸಿ 14 ಮಂದಿ ಸಾವಿಗೀಡಾಗಿದ್ದರು. ಪಟಾಕಿ ಅಂಗಡಿಗೆ 1ಸಾವಿರ ಕೆ.ಜಿ ಮಾತ್ರ ಸ್ಟಾಕ್ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಿಗೆ ನೀಡಿರುವ ಹಿನ್ನಲೆಯಲ್ಲಿ ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನ ಸೇವೆಯಿಂದ ಅಮಾನತು ಮಾಡಿ ಇಲಾಖೆ ತನಿಖೆಗೆ ಆದೇಶಿಸಲಾಗಿದೆ.

Related posts

2019ಕ್ಕಿಂತ ಮುಂಚೆ ನೋಂದಾಯಿಸಲಾದ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ: ಬದಲಿಸದಿದ್ದರೇ ಬೀಳುತ್ತೆ ದಂಡ..

ವಿದ್ಯಾರ್ಥಿಗಳು ಸಾಮಾಜಿಕ ಅಧ್ಯಯನಗಳಲ್ಲಿ ತೊಡಗಿಸಿಕೊಳ್ಳಿ-ಡಾ.ವೈ.ಎಂ.ಉಪ್ಪಿನ್

ತೀವ್ರಗೊಂಡ ಕಾವೇರಿ ಹೋರಾಟ: ಅಖಂಡ ಕರ್ನಾಟಕ ಬಂದ್: ಬೀದಿಗಳಿದು ಪ್ರತಿಭಟನೆ..