ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಾವಿರಾರು ಅರಣ್ಯವಾಸಿಗಳಿಗೆ ಶೀಘ್ರವೇ ಹಕ್ಕುಪತ್ರ-ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು:   ಕಾಡಿನಲ್ಲಿ 1978ಕ್ಕೆ ಮುನ್ನ ವಾಸಿಸುತ್ತಿದ್ದ ಅರಣ್ಯವಾಸಿಗಳು, ಅಥವಾ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿದ್ದವರು ಸ್ಪಷ್ಟ ದಾಖಲೆ ಸಹಿತ ನಿಯಮಾನುಸಾರ ನಿಗದಿತ ಕಾಲಮಿತಿಯಲ್ಲಿ ಅರ್ಜಿ ಸಲ್ಲಿಸಿದ್ದು, ಪ್ರಕರಣ ಇತ್ಯರ್ಥವಾಗದೇ ಬಾಕಿ ಉಳಿದಿರುವ 10 ಸಾವಿರ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಸಾವಿರಾರು ಜನರಿಗೆ ಹಕ್ಕುಪತ್ರ ವಿತರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಇಂದು ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನಕ್ಕೆ ಭೇಟಿ ನೀಡಿ, ಚಿರತೆ ಮತ್ತು ಜಿಂಕೆಗಳ ಸಾವಿನ ಖುದ್ದು ಪರಿಶೀಲನೆ ನಡೆಸಿದ ಬಳಿಕ, ವಿವಿಧ ಜಿಲ್ಲೆಗಳ ಅರಣ್ಯಾಧಿಕಾರಿಗಳೊಂದಿಗ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವ ಈಶ್ವರ್ ಖಂಡ್ರೆ, ಅರ್ಹ ಅರಣ್ಯವಾಸಿಗಳು ಸಲ್ಲಿಸಿರುವ ಸಾವಿರಾರು ಅರ್ಜಿ ಹಲವಾರು ವರ್ಷಗಳಿಂದ ಇತ್ಯರ್ಥವಾಗದೆ ಇರುವುದು ತಮ್ಮ ಗಮನಕ್ಕೆ ಬಂದಿದ್ದು, 3 ತಿಂಗಳ ಕಾಲಮಿತಿಯಲ್ಲಿ ಸಮರೋಪಾದಿಯಲ್ಲಿ ಈ ಎಲ್ಲ ಅರ್ಹರಿಗೆ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಹಲವಾರು ವರ್ಷಗಳಿಂದ ಈ ವಿಷಯ ನನೆಗುದಿಗೆ ಬಿದ್ದಿದ್ದು, ಅರಣ್ಯವಾಸಿಗಳಿಗೆ ಮತ್ತು ಅರಣ್ಯ ಭೂಮಿಯಲ್ಲಿ 1978ಕ್ಕೆ ಮುನ್ನ ನಿಯಮಾನುಸಾರ ಉಳಿಮೆ ಮಾಡುತ್ತಿರುವ, ನೆಲೆಸಿರುವ ಜನರಿಗೆ ಸಿಹಿಸುದ್ದಿ ನೀಡಿ ಎಂದ ಅವರು, ಈ ಸಂಬಂಧ ನಾಳೆ ಅಧಿಕಾರಿಗಳ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅರ್ಜಿ ವಿಲೇವಾರಿಗೆ ಸುತ್ತೋಲೆ ಹೊರಡಿಸುವುದಾಗಿಯೂ ತಿಳಿಸಿದರು.

Related posts

 ಸಿಎಂ ನಿವಾಸದ ಬಳಿ ಪಿಎಸ್ ಐ ಹುದ್ದೆ ಪರೀಕ್ಷಾರ್ಥಿಗಳಿಂದ ಪ್ರತಿಭಟನೆ.

ಕಲೆ ಸವಾಲು ಎದುರಿಸುವ ಶಕ್ತಿ ನೀಡುತ್ತದೆ-ಜಿ.ಎಸ್.ನಾರಾಯಣರಾವ್

ಸೆ.18ರಿಂದ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ಕರೆದ ಸರ್ಕಾರ