ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳು

ಇಂದು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್.

ಬೆಂಗಳೂರು: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಇಂದು  ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪೂರ್ಣಿಮಾ ಶ್ರೀನಿವಾಸ್ ಅವರು  ಅಧಿಕೃತವಾಗಿ ಬಿಜೆಪಿಗೆ ಗುಡ್​ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಕಳೆದ ತಿಂಗಳಷ್ಟೇ ಕೆ.ಆರ್. ಪುರದಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿದ್ದರು. ಈ ವೇಳೆ ಪಕ್ಷ ಸೇರುವುದಾಗಿ ಡಿಕೆಶಿಗೆ ಪೂರ್ಣಿಮಾ ಭರವಸೆ ಕೊಟ್ಟಿದ್ದರು.  ಅದರಂತೆ ಇದೀಗ ಕಾಂಗ್ರೆಸ್‌ ಸೇರುತ್ತಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದ ಕೆ ಪೂರ್ಣಿಮಾ ಶ್ರೀನಿವಾಸ್  2023ರ ಚುನಾವಣೆಯಲ್ಲಿ ಸೋಲು ಕಂಡರು. ಸೋತ ಮೂರ್ನಾಲ್ಕು ತಿಂಗಳಲ್ಲೇ ಇದೀಗ ಕಾಂಗ್ರೆಸ್​ನತ್ತ ಮುಖಮಾಡಿದ್ದಾರೆ.

Related posts

ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ: ಸಕಾಲದಲ್ಲಿ ನೇತ್ರ ತಪಾಸಣೆಯು ಅಗತ್ಯ-ವೈದ್ಯೆ ಡಾ. ವರ್ಷಾ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ಕರುನಾಡು ಸಂರಕ್ಷಣಾ ವೇದಿಕೆ ಪ್ರತಿಭಟನೆ.

ಇಬ್ಬರು ಬಿಜೆಪಿ ನಾಯಕರಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ, ಚರ್ಚೆ.