ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶೀಘ್ರದಲ್ಲೇ ವಿಪಕ್ಷ ನಾಯಕನ ಆಯ್ಕೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22-23 ಸೀಟು ಗೆಲ್ಲಿಸುವ ವಿಶ್ವಾಸ ಇದೆ. ಶೀಘ್ರದಲ್ಲೇ ವಿಪಕ್ಷ ನಾಯಕನನ್ನು ಆಯ್ಕೆ ಮಾಡುತ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕರು ಇಲ್ಲ ಅಂತಾ ನಾವು ನಮ್ಮ ಕೆಲಸ ನಿಲ್ಲಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರವಾಸ ಆರಂಭಿಸುವೆ ಎಂದು ಹೇಳಿದರು.

ಇನ್ನು ಬಿಎಸ್ ವೈ  ಜೈಲಿಗೆ ಹೋಗಲು ಬಿಜೆಪಿಯವರೇ ಕಾರಣ ಎಂಬ  ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿಕೆ  ಕುರಿತು ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ರೇಣುಕಾಚಾರ್ಯ ಜೊತೆ ಮಾತನಾಡಿದ್ದೇನೆ. ನಾನು ಯಾವುದರ ಬಗ್ಗೆಯೂ ಚರ್ಚೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿಕೊಂಡು ಪಕ್ಷ ಸಂಘಟನೆ ಮಾಡಬೇಕಿದೆ ಎಂದು ತಿಳಿಸಿದರು.

ವಲಸಿಗ ಬಿಜೆಪಿ ಶಾಸಕರು ಮತ್ತೆ ಕಾಂಗ್ರೆಸ್‌ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿಎಸ್ ವೈ, ಯಾವ ಶಾಸಕರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿಲ್ಲ. ನಮ್ಮ ಎಲ್ಲಾ ಶಾಸಕರ ಜೊತೆಗೂ ನಾನು ಮಾತನಾಡಿದ್ದೇನೆ ಎಂದರು.

Related posts

 ಓರ್ವ ಸ್ವಾಮೀಜಿ ಮತ್ತು ರಾಜ್ಯದ ಮೂವರು ಸಚಿವರಿಗೆ ಜೀವಬೆದರಿಕೆ ಪತ್ರ.

ಸರ್ಕಾರ 5 ವರ್ಷ ಕಲ್ಲುಬಂಡೆಯಂತೆ ಇರುತ್ತೆ: ಆಪರೇಷನ್ ಕಮಲದ ಹಗಲುಗನಸು ಕಾಣುವುದನ್ನ ಬಿಡಿಬೇಕು- ಬಿಜೆಪಿಗೆ ಸಚಿವ ಶಿವರಾಜ್ ತಂಗಡಗಿ ಟಾಂಗ್.

ರೈತರಿಗೆ ಆಯುರ್ವೇದ ಕುರಿತ ಕಾರ್ಯಾಗಾರ ನವೆಂಬರ್‌ 7ಕ್ಕೆ