ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜೆಡಿಎಸ್-ಬಿಜೆಪಿ  ಮೈತ್ರಿ  ಬಗ್ಗೆ ದೆಹಲಿಯಲ್ಲೇ ಚರ್ಚೆಯಾಯಿತೇ..? -ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೊಟ್ಟ ಸ್ಪಷ್ಟನೆ ಏನು..?

ಬೆಂಗಳೂರು : ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸಭೆಯಲ್ಲಿ  ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಚರ್ಚೆಯಾಗಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಇಂದು ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಬಿಎಸ್ ಯಡಿಯೂರಪ್ಪ,  ವರಿಷ್ಠರ ಜೊತೆ ರಾಜ್ಯ ರಾಜಕೀಯ ವಿಚಾರದ ಬಗ್ಗೆ ಚರ್ಚೆಯಾಗಿಲ್ಲ. ನರೇಂದ್ರ ಮೋದಿ, ಅಮಿತ್ ಶಾ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಮೈತ್ರಿಗೆ ರಾಜ್ಯ ಬಿಜೆಪಿ ನಾಯಕರ ಆಕ್ಷೇಪ ಅಂತಾ ಏನೂ ಇಲ್ಲ. ಆದರೆ ವರಿಷ್ಠರು ಏನು ತೀರ್ಮಾನ ಮಾಡುತ್ತಾರೋ ನೋಡಬೇಕು. ಇದರಲ್ಲಿ ವೈಯಕ್ತಿಕ ಅಭಿಪ್ರಾಯ ಏನೂ ಇರುವುದಿಲ್ಲ ಎಂದರು.

ತಮಿಳುನಾಡಿಗೆ ಒಂದು ತೊಟ್ಟು ನೀರನ್ನು ಬಿಡಬಾರದು.

ತಮಿಳುನಾಡಿಗೆ ನೀರು ಹರಿಸುವಂತೆ ಪ್ರಾಧಿಕಾರ ಆದೇಶ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ,  ತಮಿಳುನಾಡಿಗೆ ಒಂದು ತೊಟ್ಟು ನೀರನ್ನು ಕೂಡ ಬಿಡಬಾರದು. ನೀರು ಬಿಟ್ಟು ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧ ಮಾಡಿದೆ. ಕೂಡಲೇ ಸರ್ಕಾರ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Related posts

ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ನಿವಾಸಕ್ಕೆ ಆರ್.ಎಂ ಮಂಜುನಾಥಗೌಡ ಭೇಟಿ: ಸ್ಪಂದನ ಅವರ ನಿಧನಕ್ಕೆ ತೀವ್ರ ಸಂತಾಪ.

ವಿಧಾನ ಪರಿಷತ್ ಸದಸ್ಯರಾಗಿ ಉಮಾಶ್ರೀ, ಸುಧಾಮ್ ದಾಸ್, ಎಂ.ಆರ್.ಸೀತಾರಾಮ್ ಪ್ರಮಾಣ ವಚನ ಸ್ವೀಕಾರ

ಎನ್ಇಎಸ್‌ ಸಂಸ್ಥೆಗೆ ಟಾಟಾ ಗ್ರೀನ್‌ ಚಾಂಪಿಯನ್‌ ಪ್ರಶಸ್ತಿ