ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​-ಬಿಜೆಪಿ ​​ಮೈತ್ರಿ ಫಿಕ್ಸ್: ಮಾಜಿ ಸಿಎಂ  ಬಿಎಸ್​ ಯಡಿಯೂರಪ್ಪ ಸ್ಪಷ್ಟನೆ.

ಬೆಂಗಳೂರು,:  ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್  ಮೈತ್ರಿ ಕುರಿತು ಸುದ್ದಿ ಹಬ್ಬಿದ ಬೆನ್ನಲ್ಲೆ ಮೈತ್ರಿ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ,  ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​​ ಮೈತ್ರಿ ಬಗ್ಗೆ ಉಭಯ ಪಕ್ಷಗಳ ವರಿಷ್ಠರ ಜೊತೆ ಮಾತುಕತೆ ನಡೆದಿದೆ. ನಮ್ಮ ವರಿಷ್ಠರ ಜೊತೆ ಜೆಡಿಎಸ್ ವರಿಷ್ಠರು ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​ ಜೊತೆ​​ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ.

ಬಿಜೆಪಿ ಜೆಡಿಎಸ್ ಮೈತ್ರಿಗೆ ಅಮಿತ್ ಶಾ ಒಪ್ಪಿದ್ದಾರೆ . ಜೆಡಿಎಸ್ ​ಗೆ ನಾಲ್ಕು ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತುಕತೆ ನಡೆದಿದೆ. ಮೈತ್ರಿಯಿಂದ ಲೋಕಸಭಾ ಚುನಾವಣೆಯಲ್ಲಿ ಮತ್ತಷ್ಟು ಶಕ್ತಿ ಬರಲಿದೆ. ಜೆಡಿಎಸ್ ಜೊತೆಗಿನ ಮೈತ್ರಿ ಪಕ್ಷಕ್ಕೆ ಸಹಕಾರಿಯಾಗಲಿದೆ.  ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 26 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.

Related posts

ಗೌರಿ ಗಣೇಶ, ದಸರಾ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಭಾರತದ ಸಂಸ್ಥೆಗಳನ್ನು ಆರ್ ಎಸ್ ಎಸ್ ವಶಪಡಿಸಿಕೊಳ್ಳಲು ಬಿಡುವುದಿಲ್ಲ- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಮಹಾತ್ಮ ಗಾಂಧಿ ‌ಅಲೋಚನೆ ಇಂದಿಗೂ ಸ್ಫೂರ್ತಿ- ಎಸ್.ರಾಜಶೇಖರ್