ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಮಹಿಳಾ ಮೀಸಲಾತಿ ಮಸೂದೆ ಕಾಂಗ್ರೆಸ್ ನ ಜಯ; ಮಾಜಿ ಕೇಂದ್ರ ಸಚಿವ ಚಿದಂಬರಂ

ನವದೆಹಲಿ:  ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ನಡೆಯುತ್ತಿದ್ದು. ರಾಜಕೀಯದಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸಲು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸಲು ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡಲಾಗಿದೆ. .

ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡಲು ಒಪ್ಪಿಗೆ ನೀಡಲಾಗಿದೆ. ಈ ಕುರಿತು ದೇಶಾದ್ಯಂತ ಚರ್ಚೆಗಳು ಆರಂಭವಾಗಿವೆ.

ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕಪಿ. ಚಿದಂಬರಂ, ಮಹಿಳಾ ಮೀಸಲಾತಿ ಮಸೂದೆ ಕಾಂಗ್ರೆಸ್ ನ ಜಯ ಎಂದು ಟ್ವೀಟ್ ಮಾಡಿದ್ದಾರೆ.

ಒಂದು ವೇಳೆ ಸರ್ಕಾರ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡಿದರೆ ಇದು ಕಾಂಗ್ರೆಸ್ ಮತ್ತು ಯುಪಿಎ ಮೈತ್ರಿಕೂಟದ ಜಯ’ ಎಂದು ಹೇಳಿದ್ದಾರೆ.

“ನೆನಪು ಮಾಡಿಕೊಳ್ಳಿ ಈ ಮಸೂದೆಯನ್ನು ಯುಪಿಎ ಸರ್ಕಾರ ಇದ್ದಾಗ ರಾಜ್ಯಸಭೆಯಲ್ಲಿ 9/3/2010ರಲ್ಲಿ ಅನುಮೋದಿಸಿತ್ತು. 10 ವರ್ಷಗಳ ಬಳಿಕ ಬಿಜೆಪಿ ಈ ಮಸೂದೆಯನ್ನು ಪುನರುಜ್ಜೀವನಗೊಳಿಸುತ್ತಿದೆ’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.

“ಹೈದರಾಬಾದ್ನಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಸಂಸದೀಯ ಮಂಡಳಿ ಸಭೆಯಲ್ಲಿ ಈ ಮಸೂದೆಯನ್ನು ಲೋಕಸಭೆಯಲ್ಲಿ ಅನುಮೋದಿಸಬೇಕು ಎಂದು ತೀರ್ಮಾನಿಸಲಾಗಿತ್ತು. ಈ ವಿಶೇಷ ಅಧಿವೇಶನದಲ್ಲಿಯೇ ಮಸೂದೆ ಮಂಡನೆಯಾಗಲಿದೆ ಮತ್ತು ಅನುಮೋದನೆಗೊಳ್ಳಲಿದೆ ಎಂಬ ನಿರೀಕ್ಷೆ ಇದೆ” ಎಂದು ಪಿ. ಚಿದಂಬರಂ ಟ್ವೀಟ್ ಮಾಡಿದ್ದಾರೆ.

ಮಸೂದೆಯ ಅಂಶಗಳು ಸಂಸತ್ ವಿಶೇಷ ಅಧಿವೇಶನದಲ್ಲಿ ಈ ಮಸೂದೆಗೆ ಸಿ ಒಪ್ಪಿಗೆ ಪಡೆದರೆ ಐತಿಹಾಸಿಕ ನಿರ್ಣಯವಾಗಲಿದೆ. ಲೋಕಸಭೆಯ ಮತ್ತು ವಿಧಾನಸಭೆಗಳಲ್ಲಿ ಶೇ 33ರಷ್ಟು ಸ್ಥಾನವನ್ನು ಮಹಿಳೆಯರಿಗೆ ನೀಡಬೇಕು ಎಂಬುದು ಮಸೂದೆಯ ಪ್ರಮುಖ ಅಂಶವಾಗಿದೆ.

ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ಸುಮಾರು 90 ನಿಮಿಷಗಳ ಕಾಲ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಸೂದೆ ಕುರಿತು ವಿವರವಾದ ಚರ್ಚೆಗಳು ನಡೆದಿವೆ. ಬಳಿಕ ಕಲಾಪದಲ್ಲಿ ಮಸೂದೆ ಮಂಡನೆ ಮಾಡಲು ಒಪ್ಪಿಗೆ ನೀಡಲಾಗಿತ್ತು.

ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಟ್ವೀಟ್ ಮಾಡಿ, “ಮಹಿಳಾ ಮೀಸಲಾತಿ ಬೇಡಿಕೆಯನ್ನು ಈಡೇರಿಸುವ ನೈತಿಕ ಧೈರ್ಯ ಮೋದಿ ಸರ್ಕಾರಕ್ಕೆ ಮಾತ್ರ ಇದೆ. ಇದು ಸಂಪುಟದ ಅನುಮೋದನೆಯೊಂದಿಗೆ ಸಾಬೀತಾಗಿದೆ” ಎಂದು ಹೇಳಿದ್ದಾರೆ.

ಹಾಲಿ ಸಂಸತ್ನಲ್ಲಿ ಮಹಿಳೆಯರ ಪ್ರಾತಿನಿಧ್ಯ ಶೇ 14ರಷ್ಟಿದೆ. ಸಾಕಷ್ಟು ವರ್ಷಗಳಿಂದ ಶೇ 33ರಷ್ಟು ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಇತ್ತು. 1996ರಲ್ಲಿ ಎಚ್. ಡಿ. ದೇವೇಗೌಡರು ಪ್ರಧಾನಿಯಾಗಿದ್ದಾಗ ಮೊದಲ ಬಾರಿಗೆ ಈ ಮಸೂದೆ ಮಂಡನೆಯಾಗಿತ್ತು. ಆದರೆ ಸಂಸತ್ನಲ್ಲಿ ಇದುವರೆಗೂ ಈ ಮಸೂದೆ ಅಂಗೀಕಾರವಾಗಿಲ್ಲ.

 

Related posts

 48 ತಾಸಿನೊಳಗೆ ಫಲಿತಾಂಶ ಪ್ರಕಟಿಸಿ ಶೈಕ್ಷಣಿಕ ದಾಖಲೆ ಸೃಷ್ಠಿಸಿದ ಕುವೆಂಪು ವಿವಿ

RANK ಪಡೆದು ಸಾಧನೆ ಮಾಡಿದ ತನ್ನ ಪುತ್ರನಿಗೆ ಬಹುಮಾನ ವಿತರಿಸಿ ಸಂತಸಪಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಈದ್ ಮಿಲಾದ್ ರ್ಯಾಲಿ ವೇಳೆ ಕಲ್ಲು ತೂರಾಟ: ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿ.