ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜಿ ಎಮ್‍ನಲ್ಲಿ ಗಾಂಧಿ ಜಯಂತಿ ಆಚರಣೆ – ಸ್ವಚ್ಛತಾ ಅಭಿಯಾನ

ಶಿವಮೊಗ್ಗ:  ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ ಅ.02 ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಮಾತನಾಡಿ ಸತ್ಯ, ಶಾಂತಿ ಮತ್ತು ಅಹಿಂಸೆಯ ಪ್ರತಿಪಾದಕ, ಸರ್ವ ಧರ್ಮ ಸಮನ್ವಯದ ಜತ್ಯಾತೀತ ಭಾರತಕ್ಕೆ ಮುನ್ನುಡಿ ಬರೆದ ಮಹಾನ್ ಮಾನವತಾವಾದಿ ಗಾಂಧೀಜಿಯವರು ಗ್ರಾಮಗಳನ್ನು ಸುವರ್ಣ ಗ್ರಾಮವನ್ನಾಗಿಸಬೇಕು ಎಂಬ ಕನಸನ್ನು ಕಂಡಿದ್ದರು. ಆ ನಿಟ್ಟಿನಲ್ಲಿ ನಾವೆಲ್ಲರೂ ಗ್ರಾಮಗಳ ಅಭಿವೃದ್ಧಿಗೆ, ಉತ್ತಮ ಶಿಕ್ಷಣ, ಸ್ವಚ್ಛತೆ ಹಾಗೂ ಉತ್ತಮ ಪರಿಸರ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ತಿಳಿಸಿದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಸಂದೇಶ ಅವರ ತತ್ವಗಳು ನಮಗೆಲ್ಲರಿಗೂ ಆದರ್ಶವಾಗಿದೆ. ದೇಶಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಮಹಾನ್ ನಾಯಕರನ್ನು ಸ್ಮರಿಸುವುದು, ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಶಾಲಾ ಶಿಕ್ಷಕರು ಮಹಾನ್ ನಾಯಕರ ಸಾಧನೆ ಹಾಗೂ ಅವರು ದೇಶಕ್ಕೆ ನೀಡಿದ ಕೊಡೆಗೆಗಳ ಬಗ್ಗೆ ತಿಳಿಸಿದರು. ನಂತರ ಜಿ ಎಮ್ ಹಾಸ್ಟೆಲ್ ವಿದ್ಯಾರ್ಥಿಗಳು ಶಾಲಾ ಪರಿಸರ ಹಾಗೂ ಸ್ಥಳೀಯ ಸಾರ್ವಜನಿಕ ರಸ್ತೆಗಳಲ್ಲಿ ಪ್ಲಾಸ್ಟಿಕ್ ಮತ್ತು ಕಸಗಳನ್ನು ತೆರವುಗೊಳಿಸಿ, ಜನರಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಟ್ರಾನ್ಸ್‍ಪೆÇೀರ್ಟ್ ಮ್ಯಾನೇಜರ್ ತ್ಯಾಗೀಶ್ಚಂದ್ರ ಶೆಟ್ಟಿ, ಶಿಕ್ಷಕ ವೃಂದ, ಸಹ ಸಿಬ್ಬಂದಿ ವರ್ಗ, ಜಿ ಎಮ್ ಹಾಸ್ಟೆಲ್‍ನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ರಾಜ್ಯದಲ್ಲೂ ನ್ಯುಮೋನಿಯಾ ವೈರಸ್ ಭೀತಿ: ಸರ್ಕಾರದಿಂದ ಅಲರ್ಟ್..

ಸಂಘಟನೆ ಕೊರತೆಯಿಂದ ರೈತರು ಶೋಷಣೆಗೆ ಗುರಿಯಾಗುತ್ತಿದ್ದಾರೆ : ನಬಾರ್ಡ್ ಕಾರ್ಯನಿರ್ವಾಹಕ ವ್ಯವಸ್ಥಾಪಕ ಟಿ. ರಮೇಶ್

TOD News

ಪ್ರಖ್ಯಾತ ಜ್ಯೋತಿಷ್ಯ ಬರಹಗಾರ ಡಾ.ಎಸ್.ಕೃಷ್ಣ ಕುಮಾರ್ ನಿಧನ