ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹಳೇ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ಹಳೇ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಿಹಿಸುದ್ದಿ ಸಿಕ್ಕಿದ್ದು ಎನ್ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ  ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ರಾಜ್ಯದ ಎನ್ಪಿಎಸ್ ನೌಕರರ ಸಂಘಟನೆಯ ಮುಖಂಡರು ಹಳೆ ಪಿಂಚಣಿ ಯೋಜನೆ ಜಾರಿ ಮಾಡುವ ಕುರಿತಾಗಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಎನ್ ಪಿಎಸ್ ರದ್ದು ಮಾಡಿ ಹಳೆ ಪಿಂಚಣಿ ಜಾರಿಗೊಳಿಸುವ ಬಗ್ಗೆ ಎನ್ಪಿಎಸ್ ನೌಕರರ ಸಂಘಟನೆ, ರಾಜ್ಯ ಪ್ರಾಥಮಿಕ ಶಿಕ್ಷಣ ಸಂಘದ ಪದಾಧಿಕಾರಿಗಳು ಹಾಗೂ ಸಚಿವಾಲಯದ ನೌಕರರ ಪದಾಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿ ಎನ್ಪಿಎಸ್ ರದ್ದತಿಯ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.

ಒಪಿಎಸ್ ಜಾರಿ ಮಾಡುವ ಬಗ್ಗೆ ಶೀಘ್ರದಲ್ಲಿಯೇ ಬೃಹತ್ ಸಮಾವೇಶ ಆಯೋಜಿಸುವಂತೆ ಸಿಎಂ ತಿಳಿಸಿದ್ದು, ಸಮಾವೇಶದಲ್ಲಿ ಎನ್ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಸರ್ಕಾರಿ ನೌಕರರಿಗೆ ನೀಡಿರುವ ಭರವಸೆಯಂತೆ ಎನ್ಪಿಎಸ್ ರದ್ದತಿ ಭರವಸೆಯನ್ನು ಈಡೇರಿಸುವುದಾಗಿ ಸಿಎಂ ತಿಳಿಸಿದ್ದು, ನೌಕರರ ಮನವಿ ಆಲಿಸಿ ಹಳೆ ಪಿಂಚಣಿ ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಸಭೆಯಲ್ಲಿ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ ತೇಜಾ, ಕಾರ್ಯದರ್ಶಿ ನಾಗಭೂಷಣ್, ರಾಜ್ಯ ಪ್ರಾಥಮಿಕ ಶಿಕ್ಷಣ ಸಂಘದ ಅಧ್ಯಕ್ಷ ನಾಗೇಶ್, ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವ ಅಧ್ಯಕ್ಷ ಶಿವರುದ್ರಯ್ಯ ಹಾಗೂ ಎನ್ಪಿಎಸ್ ನೌಕರರ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಇದ್ದರು.

 

Related posts

ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು..

ಮಕ್ಕಳ ದಸರಾ ಸಮಿತಿ ವತಿಯಿಂದ ವಿವಿಧ ಸ್ಪರ್ಧೆ, ಕ್ರೀಡಾ ಸ್ಪರ್ಧೇ ಆಯೋಜನೆ-ರೇಖಾ ರಂಗನಾಥ್

ಪೋಕ್ಸೋ ಪ್ರಕರಣ: ಮುರುಘ ಶ್ರೀಯ ಮತ್ತೆ ಬಂಧನ.