ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪದವೀಧರರಿಗೆ ಗುಡ್ ನ್ಯೂಸ್ : 8283 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ SBI

ಬೆಂಗಳೂರು:  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಪದವೀಧರರಿಗೆ ಸಿಹಿಸುದ್ದಿ ನೀಡಿದ್ದು,  8283 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ನವೆಂಬರ್ 17, 2023 ರಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ SBI ಕ್ಲರ್ಕ್ ನೇಮಕಾತಿ 2023 ಗಾಗಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕ್ಲೆರಿಕಲ್ ಕೇಡರ್ನಲ್ಲಿ ಜೂನಿಯರ್ ಅಸೋಸಿಯೇಟ್ (ಗ್ರಾಹಕ ಬೆಂಬಲ ಮತ್ತು ಮಾರಾಟ) ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SBI ನ ಅಧಿಕೃತ ವೆಬ್ಸೈಟ್ sbi.co ಗಮನಿಸಬಹುದು.

ಈ ನೇಮಕಾತಿ ಡ್ರೈವ್ ಕ್ಲೆರಿಕಲ್ ಕೇಡರ್ ನಲ್ಲಿ ಜೂನಿಯರ್ ಅಸೋಸಿಯೇಟ್ 8283 ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು.  ಅರ್ಜಿ ಸಲ್ಲಿಕೆ ನವೆಂಬರ್ 17 ರಿಂದ ಆರಂಭವಾಗಿದೆ . ಡಿಸೆಂಬರ್ 7 2023 ಅರ್ಜಿ ಸಲ್ಲಿಕೆಗೆ ಕಡೆಯದಿನವಾಗಿದೆ.

ಅರ್ಹತೆಯ ಮಾನದಂಡ

ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ. ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ(IDD) ಪ್ರಮಾಣಪತ್ರವನ್ನು ಹೊಂದಿರುವ ಅಭ್ಯರ್ಥಿಗಳು IDD ಪಾಸ್ ಮಾಡುವ ದಿನಾಂಕವು ಡಿಸೆಂಬರ್ 31, 2023 ರಂದು ಅಥವಾ ಅದಕ್ಕಿಂತ ಮೊದಲು ಎಂದು ಖಚಿತಪಡಿಸಿಕೊಳ್ಳಬೇಕು. ವಯಸ್ಸಿನ ಮಿತಿಯು 20 ವರ್ಷದಿಂದ 28 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ

ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ750 ರೂ., OBC/ EWS ವರ್ಗಕ್ಕೆ. SC/ ST/ PwBD/ ESM/DESM ಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಜನವರಿ 2024ರಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು ಫೆಬ್ರವರಿ 2024ರಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ.

ಆಯ್ಕೆ ಪ್ರಕ್ರಿಯೆ

ಆಯ್ಕೆ ಪ್ರಕ್ರಿಯೆಯು ಆನ್ಲೈನ್ ಪರೀಕ್ಷೆ(ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ) ಮತ್ತು ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. 100 ಅಂಕಗಳಿಗೆ ಆಬ್ಜೆಕ್ಟಿವ್ ಪರೀಕ್ಷೆಗಳನ್ನು ಒಳಗೊಂಡಿರುವ ಆನ್ಲೈನ್ ಪೂರ್ವಭಾವಿ ಪರೀಕ್ಷೆಯನ್ನು ಆನ್ಲೈನ್ನಲ್ಲಿ ನಡೆಸಲಾಗುತ್ತದೆ. ಈ ಪರೀಕ್ಷೆಯು 1-ಗಂಟೆ ಅವಧಿಯ 3 ವಿಭಾಗಗಳನ್ನು ಒಳಗೊಂಡಿರುತ್ತದೆ- ಇಂಗ್ಲಿಷ್ ಭಾಷೆ, ಸಂಖ್ಯಾತ್ಮಕ ಸಾಮರ್ಥ್ಯ ಮತ್ತು ತಾರ್ಕಿಕ ಸಾಮರ್ಥ್ಯ.

 

Related posts

ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕ- ಸಿಎಂ ಸಿದ್ದರಾಮಯ್ಯ..

ಸಂಸದ ಬಿ.ವೈ.ರಾಘವೇಂದ್ರ ಅವರ ಅಧಿಕೃತ ವಾಟ್ಸಪ್ ಚಾನೆಲ್ ಲೋಕಾರ್ಪಣೆ

ದಲಿತ ಸಿಎಂ ವಿಚಾರದ ಬಗ್ಗೆ  ಕಾದು ನೋಡಿ – ಸಚಿವ ಕೆ.ಎಚ್ ಮುನಿಯಪ್ಪ.