ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆ.13ರಂದು ಗುರುವಂದನಾ ಹಾಗೂ ವಿಶೇಷ ಸತ್ಸಂಗ ಕಾರ್ಯಕ್ರಮ.

ಶಿವಮೊಗ್ಗ: ಚಿನ್ಮಯ ಮಿಷನ್ ವತಿಯಿಂದ ಪರಮಪೂಜ್ಯ ಸ್ವಾಮಿ ಚಿನ್ಮಯಾನಂದರ 108ನೇ ಜಯಂತಿ ಅಂಗವಾಗಿ ಆ.13ರ ಬೆಳಿಗ್ಗೆ 10ರಿಂದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಗುರುವಂದನಾ ಹಾಗೂ ವಿಶೇಷ ಸತ್ಸಂಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿನ್ಮಯ ಮಿಷನ್‍ನ ಶಿವಮೊಗ್ಗ ಶಾಖೆಯ ಕಾರ್ಯದರ್ಶಿ ಅರುಣ್ ಕುಮಾರ್ ತಿಳಿಸಿದರು.
ಅವರು ಇಂದು ಮೀಡಿಯಾ ಹೌಸ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಾರ್ಯಕ್ರಮಕ್ಕೆ ಒಂದು ಸಾವಿರ ಗುರು ಭಕ್ತರು ಹೆಸರು ನೊಂದಾಯಿಸಿಕೊಂಡಿದ್ದು, ಅವರಿಂದ ಸಾಮೂಹಿಕ ಭಜನಾ ಗಾಯನ ಹಾಗೂ ಸ್ತೋತ್ರ ಪಠಣ ಕಾರ್ಯಕ್ರಮ ನಡೆಯಲಿದೆ ಎಂದರು.
ಪ್ರಸ್ತುತ ಕರ್ನಾಟಕ ಚಿನ್ಮಯ ಮಿಷನ್‍ನ ಅಧ್ಯಕ್ಷರಾದ ಸ್ವಾಮಿ ಬ್ರಹ್ಮಾನಂದ ಸರಸ್ವತಿಯವರ ಸಾನಿಧ್ಯದಲ್ಲಿ ಬೆಳಿಗ್ಗೆ 10 ಗಂಟೆಗೆ ವೇದಘೋಷದೊಂದಿಗೆ ಆರಂಭವಾಗಲಿದೆ. 10-30ಕ್ಕೆ ಒಂದು ಸಹಸ್ರ ಕಂಠದಿಂದ ಸಾಮೂಹಿಕ ಸ್ತೋತ್ರ ಪಠಣ, 11ಕ್ಕೆ ಸಾಮೂಹಿಕ ಭಜನಾ ಗಾಯನ, 11-30ಕ್ಕೆ ಅಷ್ಟೋತ್ತರ ಶತನಾಮಾವಳಿಯೊಂದಿಗೆ ಪಾದುಕಾ ಪೂಜೆ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಲಿದೆ ಎಂದರು.
12 ಗಂಟೆಗೆ ಸ್ವಾಮಿ ಬ್ರಹ್ಮಾನಂದ ಸರಸ್ವತಿಯವರಿಂದ ಸತ್ಸಂಗ ನಡೆಯಲಿದ್ದು, 1 ಗಂಟೆಗೆ ಗುರುಭಕ್ತರಿಂದ ಗುರುದಕ್ಷಿಣೆ ಸಮರ್ಪಣೆ, ಹಾಗೂ ಮಹಾಪ್ರಸಾದ ವಿನಿಯೋಗದೊಂದಿಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ, ಶಾಸರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್.ಅರುಣ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆಗಮಿಸಲಿದ್ದಾರೆ ಎಂದರು.
ಹೆಚ್ಚಿನ ಮಾಹಿತಿಗಾಗಿ 98444 44820ರಲ್ಲಿ ಸಂಪರ್ಕಿಸಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ರಮೇಶ್ ಅವಧಾನಿ, ಕುಮಾರ ಶಾಸ್ತ್ರಿ, ಪ್ರವೀಣ್, ಎಂ.ಡಿ.ಕೃಷ್ಣಮೂರ್ತಿ, ಪ್ರದೀಪ್ ಉಪಸ್ಥಿತರಿದ್ದರು.

Related posts

ಸ್ವಾಭಿಮಾನಿ ಪ್ರತಿನಿಧಿಗಳ ಶ್ರಮದಿಂದಾಗಿ ಎಲ್ ಐಸಿ ಸಂಸ್ಥೆ ಯಶಸ್ಸಿನ ಪಥದಲ್ಲಿ ಮುನ್ನಡೆಯುತ್ತಿದೆ-ಸಂಸದ ಬಿ.ವೈ.ರಾಘವೇಂದ್ರ

ಪ್ರವಾಸೋದ್ಯಮ ಬೆಳೆದರೆ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ – ಸಿಎಂ ಸಿದ್ದರಾಮಯ್ಯ ನುಡಿ

ಅಂದು ನಾನು ಒಪ್ಪಿದ್ರೆ ಐದು ವರ್ಷಗಳ ಸಿಎಂ ಆಗ್ತಾ ಇದ್ದೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.