ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮುಂದಿನ ಐದು ದಿನಗಳ ಕಾಲ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ..

ಬೆಂಗಳೂರು: ಇಂದಿನಿಂದ ಮುಂದಿನ ಐದು ದಿನಗಳ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಎಚ್ಚರಿಕೆ ನೀಡಲಾಗಿದ್ದು, ಮುಂಜಾಗ್ರತ ಕ್ರಮವಾಗಿ ಅಪಾಯದ ಸ್ಥಳದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸುವ ಕೆಲಸ ನಡೆದಿದೆ.

ಮುಂದಿನ 24 ಗಂಟೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉತ್ತಕನ್ನಡ, ಹಾಗೂ ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಳೆ ಮಾಯವಾದ ಹಿನ್ನೆಲೆಯಲ್ಲಿ ರೈತರಲ್ಲಿ ಆತಂಕ ಮನೆ ಮಾಡಿತ್ತು. ಈ ನಡುವೆಯೇ ಈಗ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾದ್ರೆ ಕೊಪ್ಪಳ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಸಾಧಾರಣ ಮಳೆ ಸುರಿದಿದೆ.

 

Related posts

ಅಲರಾಂ ಅಂತಾ ದಿಂಬಿನ ಕೆಳೆಗೆ ಮೊಬೈಲ್ ಇಡೋದು ತುಂಬಾ ಡೇಂಜರ್..

ಖುಲಾಯಿಸಿದ ಅದೃಷ್ಟ: ರಾತ್ರೋರಾತ್ರಿ ಕೋಟ್ಯಾಧಿಪತಿಗಳಾದ್ರು ಇಬ್ಬರು ಸ್ನೇಹಿತರು

ದಸರಾ ಹಬ್ಬದ ಸಮೀಪದಲ್ಲಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್.