ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಂಕಷ್ಟದಲ್ಲಿರುವವರಿಗೆ ನೆರವು ನೀಡುವುದು ಮುಖ್ಯ-ಸತೀಶ್ ಚಂದ್ರ

ಶಿವಮೊಗ್ಗ: ಮನುಕುಲದ ಸೇವೆಯೇ ರೋಟರಿ ಸಂಸ್ಥೆಯ ಪ್ರಮುಖ ಆಶಯ. ಕಷ್ಟದಲ್ಲಿ ಇರುವವರಿಗೆ ನೆರವು ನೀಡುವುದು ಅತ್ಯಂತ ಮುಖ್ಯ. ಪ್ರತಿಯೊಬ್ಬರೂ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.

ಗೋಪಾಳದಲ್ಲಿ ಗ್ಯಾಂಗ್ರೀನ್‌ನಿಂದ ಬಳಸುತ್ತಿರುವ ಮಹಿಳೆಯೊಬ್ಬರು ಹಾಗೂ ಪಾರ್ಶ್ವವಾಯು ಪೀಡಿತರಿಗೆ ಆರ್ಥಿಕ ನೆರವು ಒದಗಿಸುವ ಜತೆಯಲ್ಲಿ ವಿಲ್ ಚೇರ್ ಅನ್ನು ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ವಿತರಿಸಿ ಮಾತನಾಡಿದರು.

ಸಮುದಾಯ ಸೇವೆ ಯೋಜನೆಯಡಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ನಿರಂತರವಾಗಿ ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವ ನೂರಾರು ಜನರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡಿದೆ. ಇದರಿಂದ ತುಂಬಾ ಉಪಯುಕ್ತವಾಗಲಿದೆ ಎಂದು ತಿಳಿಸಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ರೋಟರಿ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನೂರಾರು ಯೋಜನೆಗಳ ಮೂಲಕ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ವೈಯುಕ್ತಿಕವಾಗಿ ಆರೋಗ್ಯ ಸೇವೆ ಪಡೆಯಲು ಕಷ್ಟ ಪಡುತ್ತಿರುವ ಅರ್ಹರಿಗೆ ಸಹಾಯ ಹಸ್ತ ಚಾಚುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ನಿರಂತರವಾಗಿ ಸಾಮಾಜಿಕ ಕಳಕಳಿಯಿಂದ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಸಮಾಜಮುಖಿ ಆಲೋಚನೆಗಳಿಂದ ಹೆಚ್ಚು ಹೆಚ್ಚು ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಇದರಿಂದ ಸಾವಿರಾರು ಜನರಿಗೆ ಅನುಕೂಲ ಆಗುತ್ತದೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ವಿಲ್ ಚೇರ್ ವಿತರಿಸಲಾಯಿತು. ಆರ್ಥಿಕ ನೆರವು ಒದಗಿಸಲಾಯಿತು. ಇದೇ ಸಂದರ್ಭದಲ್ಲಿ ರೋಟರಿ ಶಿವಮೊಗ್ಗ ಕಾರ್ಯದರ್ಶಿ ಕಿಶೋರ್‌ಕುಮಾರ್, ಸದಸ್ಯೆ ಶಾರದಾ ಶೇಷಗಿರಿಗೌಡ, ರೋಟರಿ ಸದಸ್ಯರು ಉಪಸ್ಥಿತರಿದ್ದರು.

Related posts

ಹೆಚ್. ಕಾಂತರಾಜ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ.

ಆ.28 ರಿಂದ ಮೂರು ದಿನ ಚಕ್ರವರ್ತಿ ಸೂಲಿಬೆಲೆಯವರಿಂದ ಉಪನ್ಯಾಸ ಕಾರ್ಯಕ್ರಮ.

ಜಿಲ್ಲಾ ಮಟ್ಟದ ಖೋ – ಖೋ :  ತಮಡಿಹಳ್ಳಿ ಸರ್ಕಾರಿ ಪ್ರೌಢಶಾಲೆ ಬಾಲಕಿಯರಿಗೆ ಪ್ರಥಮ ಸ್ಥಾನ.