ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇನ್ಮುಂದೆ ಸರ್ಕಾರಿ ನ್ಯಾಯ ಬೆಲೆ ಅಂಗಡಿಯಲ್ಲಿ ಬಿಲ್ ವ್ಯವಸ್ಥೆ ಜಾರಿ

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಸರ್ಕಾರ ಹೊಸ ಹೊಸ ಯೋಜನೆಗಳ ಮೂಲಕ ಜನರನ್ನು ತನ್ನೆಡೆಗೆ ಸೆಳೆಯಲು ಮುಂದಾಗಿದ್ದು ಇದೀಗ.ಸರ್ಕಾರಿ ನ್ಯಾಯ ಬೆಲೆ ಅಂಗಡಿಯಲ್ಲಿ ಬಿಲ್ ವ್ಯವಸ್ಥೆ ಜಾರಿ ಮಾಡುತ್ತಿದೆ.

ರಾಜ್ಯದಲ್ಲಿ ಗ್ರಾಹಕರಿಗೆ ಪಡಿತರ ವಿತರಣೆ ವೇಳೆ ಹೊಸ ಪ್ರಿಂಟೆಡ್ ಬಿಲ್ ವ್ಯವಸ್ಥೆ ಜಾರಿ ಮಾಡುತ್ತಿದೆ. ಬಿಲ್ನಲ್ಲಿ ವಿತರಣೆ ಮಾಡುವ ಅಕ್ಕಿಯ ವಿವರದ ಜೊತೆಗೆ ಜನರಿಗೆ ನೀಡುವ ಪಡಿತರ ಅಕ್ಕಿ ಕೇಂದ್ರ ಸರ್ಕಾರದ ಅನುದಾನ ಎಂದು ಮುದ್ರಣ ಮಾಡಲಾಗುತ್ತಿದೆ.

ಸದ್ಯ ಕೋಲಾರ ಸೇರಿದಂತೆ ರಾಜ್ಯಾದ್ಯಂತ ಮುಂದಿನ ತಿಂಗಳಿನಿಂದ ಅಧಿಕೃತವಾಗಿ ಬಿಲ್ ವ್ಯವಸ್ಥೆ ಜಾರಿ ಮಾಡಲಿದೆ. ಈ ಮೊದಲು ಪಡಿತರ ವಿತರಣೆ ವೇಳೆಯಲ್ಲಿ ಕೈನಲ್ಲಿ ಬರೆದಿದ್ದ ಬಿಲ್ ವಿತರಣೆ ಮಾಡಲಾಗುತ್ತಿತ್ತು. ಹೊಸ ಬಿಲ್ ವ್ಯವಸ್ಥೆಯಿಂದಾಗಿ ಅಕ್ಕಿ ವಿತರಣೆಯ ಅಕ್ರಮಕ್ಕೂ ಕೂಡ ಕಡಿವಾಣ ಹಾಕಲಿದೆ.

ಅಕ್ಕಿಯಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನೊ ಯೋಜನೆ ಅನುದಾನ ಎಷ್ಟು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅನುದಾನ ಎಷ್ಟು ಅನ್ನೋದನ್ನು ಹೊಸ ಬಿಲ್ನಲ್ಲಿ ವಿವರವಾಗಿ ಮುದ್ರಿಸುವ ಜೊತೆಗೆ ಕುಟುಂಬದಲ್ಲಿ ಎಷ್ಟು ಸದಸ್ಯರಿದ್ದಾರೆ, ಎಷ್ಟು ಕೆಜಿ ಅಕ್ಕಿ, ಎಷ್ಟು ಕೆಜಿ ರಾಗಿ ಅಥವಾ ಜೋಳ ವಿತರಣೆಯಾಗಿದೆ ಅದಕ್ಕೆ ತಗುಲುವ ಮೊತ್ತವೆಷ್ಟು, ಆ ಅನುದಾನ ಎಲ್ಲಿಂದ ಬಂದಿದೆ, ಪ್ರತಿಯೊಂದು ಮಾಹಿತಿಯನ್ನು ಸದ್ಯ ಹೊಸ ಬಿಲ್ನಲ್ಲಿ ದಾಖಲಾಗುವಂತೆ ಮಾಡಿದೆ.

ಈ ವ್ಯವಸ್ಥೆಗೆ ಗ್ರಾಹಕರಿಂದಲೂ ಉತ್ತಮ ಸ್ಪಂದನೆ ಸಿಕ್ಕಿದ್ದು ಇದು ಅಕ್ಕಿ ವಿತರಣೆಯ ಸೋರಿಕೆಯನ್ನು ತಡೆಯಲಿದೆ ಅನ್ನೋದು ಗ್ರಾಹಕರ ಮಾತು.

 

Related posts

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನ.29ರವರೆಗೆ ಭಾರಿ ಮಳೆ-ಹವಮಾನ ಇಲಾಖೆ ಮುನ್ಸೂಚನೆ.

ಕನ್ನಡ ಚಲನಚಿತ್ರಗಳು ಗೆಲ್ಲಲು ಚಿತ್ರಮಂದಿರಗಳ ಸಂಖ್ಯೆ ಹೆಚ್ಚಾಗಬೇಕಿದೆ-ನಿರ್ಮಾಪಕ ಹಾಗೂ ನಿರ್ದೇಶಕ ಪನ್ನಗಾಭರಣ

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೆಯ ಬಾರಿಗೆ ಕುವೆಂಪು ವಿವಿ ಪ್ರಾಧ್ಯಾಪಕರು