ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಾತಿ ಜನಗಣತಿ ವಿಚಾರದಲ್ಲಿ ಗೊಂದಲ: ರದಿ ಹೇಗೆ ಸಲ್ಲಿಸುತ್ತಾರೆ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ಹುಬ್ಬಳ್ಳಿ:  ರಾಜ್ಯ ಸರ್ಕಾರದಲ್ಲಿ ಗೊಂದಲ, ಭಿನ್ನಾಭಿಪ್ರಾಯವಿದೆ. ಹೀಗಿರುವಾಗ ಜಾತಿ ಗಣತಿ ವರದಿ ಹೇಗೆ ಸಲ್ಲಿಸುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರದಲ್ಲೇ ಗೊಂದಲವಿದೆ. ಜಾತಿ ಜನಗಣತಿ ವಿಚಾರದಲ್ಲಿ ದೊಡ್ಡ ಪ್ರಮಾಣದ ಗೊಂದಲ‌ ಸೃಷ್ಟಿಯಾಗುತ್ತಿದೆ. ಜಾತಿಗಣತಿ ವರದಿಗೆ ಡಿ.ಕೆ.ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಮೊದಲಾದವರಿಂದ ಇದರ ಬಗ್ಗೆ ವಿರೋಧವಿದೆ.  ಸರ್ಕಾರದಲ್ಲಿ ಗೊಂದಲ, ಭಿನ್ನಾಭಿಪ್ರಾಯ ಇರುವಾಗ ವರದಿ ಹೇಗೆ ಸಲ್ಲಿಸುತ್ತಾರೆ?  ಜನರ ಹಿತದೃಷ್ಠಿಯಿಂದ ಸರ್ಕಾರ ಸರಿಯಾಗಿ‌ ನಡೆಸಬೇಕು ಎಂದು ಹೇಳಿದರು.

ಜಾತಿ ಜನಗಣತಿ ವಿಚಾರದಲ್ಲಿ ಗೊಂದಲಗಳಿವೆ. ಜನ ಐದು ವರ್ಷ ಅಧಿಕಾರ ನೀಡಿದ್ದು ಗೊಂದಲಗಳಿಲ್ಲದೇ ಕೆಲಸ ಮಾಡಲು. ಜನತಾ ದರ್ಶನ, ಜನಸಂಪರ್ಕ ಕಾರ್ಯಕ್ರಮಗಳು ನಿಂತು ಹೋಗಿವೆ. ಬಹಳಷ್ಟು ಭಾಗದಲ್ಲಿ ಸಚಿವರು ತಮ್ಮ ಕ್ಷೇತ್ರಗಳಿಗೆ ಸೀಮಿತವಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರದ ಆಡಳಿತಯಂತ್ರ ಸಂಪೂರ್ಣ ಕುಸಿತ ಕಂಡಿದೆ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.

Related posts

ಹೊಂಡಾ ಕಂಪನಿಯಿಂದ ಮೊಟ್ಟ ಮೊದಲ ಇ-ಬೈಸಿಕಲ್ ಮಾರುಕಟ್ಟೆಗೆ….

ಶಕ್ತಿ ಯೋಜನೆ ಯಶಸ್ವಿ ಬೆನ್ನಲ್ಲೆ ಸಾರಿಗೆ ನೌಕರರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಕುವೆಂಪು ವಿವಿಯ ಪದವಿ ಕೊನೆ ಸೆಮಿಸ್ಟಾರ್ ಪರೀಕ್ಷೆ ಮುಂದೂಡಿಕೆಗೆ ಆಗ್ರಹ.