ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪಠ್ಯಗಳ ಪುನರ್ ಪರಿಶೀಲನೆಗೆ ಮಹತ್ವದ ಕ್ರಮ : 37 ತಜ್ಞರ ಸಮಿತಿ ರಚಿಸಿದ ಸರ್ಕಾರ

ಬೆಂಗಳೂರು: ಪಠ್ಯಗಳ ಪುನರ್ ಪರಿಶೀಲನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 37 ತಜ್ಞರ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ಈ ಸಾಲಿನ ಮಟ್ಟಿಗೆ ಪುಸ್ತಕಗಳ ಪರಿಷ್ಕರಣೆಯನ್ನು ಕೈಬಿಟ್ಟು, ತಿದ್ದೋಲೆ ಹೊರಡಿಸಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ಆ ಎಲ್ಲಾ ಪಠ್ಯಪುಸ್ತಕಗಳನ್ನು ರಾಷ್ಟ್ರೀಯ ಪಠ್ಯ ಚೌಕಟ್ಟಿನಡಿ ಸಮಗ್ರವಾಗಿ ಪುನರ್ ಪರಿಷ್ಕರಿಸಲು 37 ವಿಷಯತಜ್ಞರನ್ನು ಒಳಗೊಂಡ ಸಮಿತಿ ರಚಿಸಿ ಮಹತ್ವದ ನಿರ್ಧಾರ ಕೈಗೊಂಡಿದೆ.

1 ರಿಂದ 10ನೇ ತರಗತಿ ಕನ್ನಡ ಪ್ರಥಮ ಭಾಷೆಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ.ಆಂಜನಪ್ಪ ಅವರ ಅಧ್ಯಕ್ಷತೆಯಲ್ಲಿ 8 ಸದಸ್ಯರನ್ನ ಒಳಗೊಂಡ ಸಮಿತಿ ರಚಿಸಲಾಗಿದೆ.

ಅದೇ ರೀತಿ ಕನ್ನಡ ದ್ವಿತೀಯ ಭಾಷೆ ಪಠ್ಯಪುಸ್ತಕ ಪರಿಷ್ಕಕರಣೆ ಸಮಿತಿಗೆ ಚಿಕ್ಕಮಗಳೂರಿನ ಬಸವನಹಳ್ಳಿಯ ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಹೆಚ್.ಎಸ್ ಸತ್ಯನಾರಾಯಣ್ ಅವರ ಅಧ್ಯಕ್ಷತೆಯಲ್ಲಿ 7 ಸದಸ್ಯರನ್ನು ನೇಮಿಸಿದೆ.

9 ಮತ್ತು 10ನೇ ತರಗತಿ ಕನ್ನಡ ತೃತೀಯ ಭಾಷೆ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ದಾವಣೆಗೆರೆಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆಯ ಉಪನ್ಯಾಸಕ ಡಾ.ಮಂಜಣ್ಣ ಅವರ ಅಧ್ಯಕ್ಷತೆಯಲ್ಲಿ ಇಬ್ಬರು ಸದಸ್ಯರು, 6 ಮತ್ತು 7ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕ ಪರಿಷ್ಕರಣೆಗೆ ಕಲಬುರ್ಗಿಯ ಕೇಂದ್ರೀಯ ವಿದ್ಯಾನಿಲಯದ ಸಾರ್ವಜನಿಕ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಕಿರಣ.ಎಂ ಅವರ ಅಧ್ಯಕ್ಷತೆಯಲ್ಲಿ ಐವರು ಸದಸ್ಯರು, 8 ಮತ್ತು 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆ ಸಮಿತಿಯ ಸಮಿತಿಗೆ ಬೆಂಗಳೂರು ವಿವಿ ಇತಿಹಾಸ ವಿಭಾಗದ ಡಾ.ಅಶ್ವತ್ಥನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಇತರೆ 8 ಸದಸ್ಯರ ಸಮಿತಿ ರಚಿಸಲಾಗಿದೆ.

ಈ ಸಮಿತಿಗಳ ಸದಸ್ಯ ಕಾರ್ಯದರ್ಶಿಯಗಾಳಿ ಕರ್ನಾಟಕ ಪಠ್ಯ ಪುಸ್ತಕ ಸಂಘದ ನಿರ್ದೇಶಕರು ಕಾರ್ಯನಿರ್ವಹಿಸಲಿದ್ದಾರೆ. ಈ ಎಲ್ಲಾ ಸಮಿತಿಗಳು ರಾಷ್ಟ್ರೀಯ ಪಠ್ಯಚೌಕಟ್ಟಿನಡಿ ಪುನರ್ ಪರಿಷ್ಕರಣೆಯನ್ನು ಮಾಡಲಿದೆ.

 

Related posts

 ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ, ಮಾತುಕತೆ

ರಾಜ್ಯದ ಹಲವೆಡೆ ಒಂದು ವಾರ ಮಳೆ- ಹವಮಾನ ಇಲಾಖೆ ಮುನ್ಸೂಚನೆ.

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಅಪಾರ್ಟ್ ಮೆಂಟ್ ಒಳಗೆ, ಸುತ್ತಾಮುತ್ತಾ ಬೀದಿಗಳಲ್ಲಿ ಓಡಾಟ:  ಜನರಲ್ಲಿ ಆತಂಕ.