ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕ್ರೀಡೆಯಲ್ಲಿ ಕ್ರೀಡಾಪಟುಗಳು ತಮ್ಮ ಸಾಮರ್ಥ್ಯವನ್ನು, ಆತ್ಮಸ್ಥೈರ್ಯ ದಿಂದ ಪ್ರದರ್ಶಿಸುವುದು ಅತ್ಯಂತ ಮುಖ್ಯ-ಪಿ.ನಾಗರಾಜ್

ಶಿವಮೊಗ್ಗ:  ಕ್ರೀಡೆಯಲ್ಲಿ ಕ್ರೀಡಾಪಟುಗಳು ತಮ್ಮ ಸಾಮರ್ಥ್ಯವನ್ನು, ಆತ್ಮಸ್ಥೈರ್ಯ ದಿಂದ ಪ್ರದರ್ಶಿಸುವುದು ಅತ್ಯಂತ ಮುಖ್ಯವಾಗಿರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ್ ಹೇಳಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ  ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ  ಕಚೇರಿ, ಶಿವಮೊಗ್ಗ. ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಶಿವಮೊಗ್ಗ.ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ  ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಮತ್ತು ಬಾಲಕಿಯರ  ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ, ಆದರೆ ತಮ್ಮಲ್ಲಿರುವ ಕ್ರೀಡಾ ಕೌಶಲ್ಯವನ್ನು ಹಾಗೂ ಸಾಮರ್ಥ್ಯವನ್ನು ಪ್ರದರ್ಶಿಸುವುದರಿಂದ ಕ್ರೀಡಾಪ್ರತಿಭೆ ಹೊರ ಹೊಮ್ಮುತ್ತದೆ ಎಂದು ಹೇಳಿದರು.
ಈಗಾಗಲೇ ಹಲವು ವಿಭಾಗ ಮಟ್ಟದಲ್ಲಿ ನೀವುಗಳು ಭಾಗವಹಿಸಿದ್ದೀರಿ ಜಿಲ್ಲೆ, ರಾಜ್ಯ, ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ದಿನಾಂಕ ನಿಗದಿಯಾಗಿದ್ದು, ಮುಂದಿನ ದಿನಗಳಲ್ಲಿ ನೀವುಗಳು ಬಾಗವಹಿಸಿ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವಂತಾಗಲಿ ಎಂದರು.
ನಾರಾಯಣ ಹೃದಯಾಲಯದ  ಮ್ಯಾನೇಜಿಂಗ್ ಡೈರೆಕ್ಟರ್ ಆದ ಶ್ರೀ ರಾಜಾ ಸಿಂಗ್ ಮಾತನಾಡಿ,ಕ್ರೀಡೆಯಿಂದ ಶಿಸ್ತು,ಸಂಯಮ ಬೆಳೆಯುವುದು. ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಕ್ರೀಡಾಪಟುಗಳಿಗೆ ತಿಳಿಸಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ   ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಶ್ರೀಮತಿ ಸುಮತಿ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ. ಬಿ.ರುದ್ರಪ್ಪ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಗಿರೀಶ್,ಎಸ್. ಜಿಲ್ಲಾ ಸಂಘದ ಖಜಾಂಚಿ ಗಿರೀಶ್.ಎಸ್., ಜಿಲ್ಲಾ ಸಂಘದ ಕಾರ್ಯದರ್ಶಿ ಗಿರೀಶ್ ಬಿ. ಎಸ್. ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ನಿರಂಜನ್ ಮೂರ್ತಿ ಬಿ. ಹೆಚ್.ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Related posts

ಪಟ್ಲರ ಗಾಯನದಲ್ಲಿ ದೈವಿಕ ಶಕ್ತಿ‌ : ಜಮ್ಮು-ಕಾಶ್ಮೀರದ ಕನ್ನಡಿಗ ಅಧಿಕಾರಿ ಮೆಚ್ಚುಗೆ

ಬಿಜೆಪಿ ನಾಯಕರು ದೆಹಲಿಗೆ ಹೋಗಿ ಪ್ರಧಾನಿಗೆ ಒತ್ತಡ  ಹೇರಲಿ- ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ.

ಅಪರಾಧ ಹಿನ್ನಲೆಯುಳ್ಳ ವ್ಯಕ್ತಿಗೆ ಟಿಕೆಟ್ ನೀಡಿದ್ರೆ ಪತ್ರಿಕೆಯ ಮೂಲಕ ಕಾರಣ ನೀಡಬೇಕು- ಕೇಂದ್ರ ಚುನಾವಣಾ ಆಯೋಗ