ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

2024ರ ಲೋಕಸಭೆ ಚುನಾವಣೆ: ಒಟ್ಟಾಗಿ ಹೋರಾಡಲು INDIA ಮೈತ್ರಿಕೂಟ ನಿರ್ಧಾರ.

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟೂ ಒಟ್ಟಾಗಿ ಹೋರಾಡಲು INDIA ಮೈತ್ರಿಕೂಟ ನಿರ್ಧರಿಸಿದೆ. ಮುಂಬೈನಲ್ಲಿ ತನ್ನ ಮೂರನೇ ಸಭೆಯನ್ನು ನಡೆಸುತ್ತಿರುವ ವಿರೋಧ ಪಕ್ಷ  ಇಂಡಿಯಾ ಮೈತ್ರಿಕೂಟ 14 ಸದಸ್ಯರನ್ನು ಒಳಗೊಂಡಿರುವ ಸಮನ್ವಯ ಸಮಿತಿಯನ್ನು ರಚಿಸಿದೆ.

ಸಮಿತಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್, ಆರ್ಜೆಡಿ ನಾಯಕ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಎಎಪಿ ಸಂಸದ ರಾಘವ್ ಇದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲು ನಿರ್ಧರಿಸಿರುವ ಇಂಡಿಯಾ ಮೈತ್ರಿಕೂಟ ಕೊಟ್ಟು- ತೆಗೆದುಕೊಳ್ಳುವ ಉತ್ಸಾಹದಲ್ಲಿ ಸೀಟು ಹಂಚಿಕೆ ವ್ಯವಸ್ಥೆಯನ್ನು ಶೀಘ್ರವಾಗಿ ಮುಕ್ತಾಯ ಗೊಳಿಸಲಾಗುವುದು ಎಂದು ಹೇಳಿದೆ. ಇದನ್ನು ಪರಿಣಾಮಕಾರಿ ಅಳವಡಿಸಿಕೊಳ್ಳಲು ನಿರ್ಣಯವೊಂದನ್ನು ಅಂಗೀಕರಿಸಲಾಗಿದೆ.

ಜುಡೇಗಾ ಭಾರತ್, ಜೀತೇಗ ಭಾರತ, (ಭಾರತ ಒಗ್ಗೂಡುತ್ತದೆ, ಭಾರತ ಗೆಲ್ಲುತ್ತದೆ) ಚುನಾವಣೆಯ ತನ್ನ ಥೀಮ್ ಎಂದು ಮೈತ್ರಿಕೂಟ ಹೇಳಿದೆ. ನಾವು ಭಾರತದ ಪಕ್ಷಗಳು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟು ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ವಿವಿಧ ರಾಜ್ಯಗಳಲ್ಲಿ ಸೀಟು ಹಂಚಿಕೆಯ ವ್ಯವಸ್ಥೆಯನ್ನು ತಕ್ಷಣವೇ ಪ್ರಾರಂಭಿಸಲಾಗುವುದು ಮತ್ತು ಕೊಟ್ಟು- ತೆಗೆದುಕೊಳ್ಳುವ ಮನೋಭಾವದಲ್ಲಿ ಶೀಘ್ರವಾಗಿ ಈ ಪ್ರಕಿಯೆಯನ್ನು ಮುಕ್ತಾಯಗೊಳಿಸಲಾಗುವುದು ಎಂದು ನಿರ್ಣಯದಲ್ಲಿ ಹೇಳಿದೆ. ಸಾರ್ವಜನಿಕ ಕಾಳಜಿ ಮತ್ತು ಪ್ರಾಮುಖ್ಯತೆಯ ವಿಷಯಗಳ ಕುರಿತು ದೇಶದ ವಿವಿಧ ಭಾಗಗಳಲ್ಲಿ ಶೀಘ್ರವಾಗಿ ಸಾರ್ವಜನಿಕ ರ್ಯಾಲಿ ಆಯೋಜಿಸಲು ನಿರ್ಧರಿಸುತ್ತೇವೆ.

INDIA ಪಕ್ಷಗಳು ತಮ್ಮ ಸಂವಹನ ಮತ್ತು ಮಾಧ್ಯಮ ಕಾರ್ಯತಂತ್ರಗಳನ್ನು ಸಂಘಟಿಸುತ್ತವೆ ಮತ್ತು ವಿವಿಧ ಭಾಷೆಗಳಲ್ಲಿ “ಜುಡೇಗಾ ಭಾರತ್, ಜಿತೀಗಾ ಇಂಡಿಯಾ” ಎಂಬ ವಿಷಯದೊಂದಿಗೆ ಪ್ರಚಾರಗಳನ್ನು ನಡೆಸುತ್ತವೆ ಎಂದು ಹೇಳಲಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಯೋಜನೆಗಳನ್ನು ಅಂತಿಮಗೊಳಿಸಲು ಮುಂಬೈನಲ್ಲಿ ಸುಮಾರು 28 ವಿಪಕ್ಷಗಳ ನಾಯಕರು ಸಭೆ ಸೇರಿದ್ದರು. ಗಂಟೆಗಳ ಚರ್ಚೆಯ ನಂತರ ಸಮನ್ವಯ ಸಮಿತಿ ರಚನೆಯೊಂದಿಗೆ ಸೆಪ್ಟೆಂಬರ್ ಅಂತ್ಯದೊಳಗೆ ಸೀಟು ಹಂಚಿಕೆಯ ಕೆಲಸವನ್ನು ಪ್ರಾರಂಭಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ರಾಷ್ಟ್ರವ್ಯಾಪಿ ಸೀಟು ಹಂಚಿಕೆ ನಡೆಯಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರು ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದರು.

ಇದೇ ವೇಳೆ ಬಿಜೆಪಿಗೆ ತಿರುಗೇಟು ನೀಡಿದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಭ್ರಷ್ಟಾಚಾರದ ವಿರುದ್ಧ ಹೋರಾಡಲು INDIA ಮೈತ್ರಿಕೂಟ ಸಂಕಲ್ಪ ಮಾಡಿದೆ ಮತ್ತು ಮಿತ್ರ-ಪರಿವಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೊಡ್ಡ ಕೈಗಾರಿಕೋದ್ಯಮಿಗಳಿಗೆ ಸಹಾಯ ಮಾಡಲು ಬಡವರ ಬದುಕನ್ನು ಹಾಳು ಮಾಡುತ್ತಿದೆ. ಹಣದುಬ್ಬರ, ನಿರುದ್ಯೋಗದ ವಿರುದ್ಧ ಹೋರಾಡಲು ನಾವೆಲ್ಲರೂ ಒಂದೇ ಗುರಿ ಹೊಂದಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ನಾವು ಕೆಲವು ಮಹತ್ವದ ನಿರ್ಣಯಗಳನ್ನೂ ಅಂಗೀಕರಿಸಿದ್ದೇವೆ. ಭಾರತ ಅಲಯನ್ಸ್ ಸಮನ್ವಯ ಸಾಧಿಸಲು 14 ಜನರ ಸದಸ್ಯ ಸಮಿತಿ ರಚನೆ ಮಾಡಲಾಗಿದೆ. ನಾಲ್ಕು ಪ್ರಮುಖ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರನ್ನು ಆ ಸಮಿತಿಗಳಲ್ಲಿ ಸೇರಿಸಲಾಗಿದೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.

 

Related posts

ಹಿಂದೂ ಮಹಾಸಭಾ ಗಣೇಶ ರಾಜಬೀದಿ ಉತ್ಸವ ಶಾಂತಿಯುತವಾಗಿ ನಡೆಯಲು ಎಲ್ಲಾ ರೀತಿಯ ಬಂದೋಬಸ್ತ್- ಎಸ್ಪಿ ಮಿಥುನ್ ಕುಮಾರ್

ಪತ್ರಕರ್ತ, ಸಾಹಿತಿ ಶಿ.ಜು.ಪಾಶ ಕಾಂಗ್ರೆಸ್ ಸೇರ್ಪಡೆ.

ಪ್ರಯಾಣಿಕರೇ ಎಚ್ಚರ: ಇನ್ಮುಂದೆ ರೈಲಿನಲ್ಲಿ ಈ ವಸ್ತುಗಳನ್ನ ತೆಗೆದುಕೊಂಡು ಹೋದ್ರೆ ಜೈಲೂಟ ಫಿಕ್ಸ್.