ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಇಸ್ಕಾನ್ ಭಾರತದ ಅತೀ ದೊಡ್ಡ ವಂಚಕ ಸಂಸ್ಥೆ: ಗೋರಕ್ಷಣೆ ಹೆಸರಲ್ಲಿ ಗೋವುಗಳನ್ನು ಕಟುಕರಿಗೆ ಮಾರಾಟ- ಮನೇಕಾ ಗಾಂಧಿ

ನವದೆಹಲಿ: ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರು ಇಸ್ಕಾನ್ ವಿರುದ್ದ ಆರೋಪಿಸಿ ನೀಡಿರುವ ಹೇಳಿಕೆಯೊಂದು ಭಾರೀ  ಚರ್ಚೆಗೆ ಕಾರಣವಾಗಿದೆ. ಹೌದು, ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ‘ದೇಶದ ಅತಿದೊಡ್ಡ ಮೋಸಗಾರ. ಇಸ್ಕಾನ್ ಭಾರತದ ಅತೀ ದೊಡ್ಡ ವಂಚಕ ಸಂಸ್ಥೆ: ಗೋರಕ್ಷಣೆ ಹೆಸರಲ್ಲಿ ಗೋವುಗಳನ್ನು ಕಟುಕರಿಗೆ ಮಾರಾಟ ಮಾಡುತ್ತಿದೆ ಎಂದು ಮನೇಕಾ ಗಾಂಧಿ ಆರೋಪಿಸಿದ್ದಾರೆ.

ರಾಷ್ಟ್ರೀಯ ಲೋಕ ದಳ (ಆರ್ಎಲ್ಡಿ) ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಪ್ರಶಾಂತ್ ಕನೋಜಿಯಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮೇನಕಾ ಗಾಂಧಿ ಹೇಳಿರುವ ಒಂದು ನಿಮಿಷದ ವೀಡಿಯೋ ಹಂಚಿಕೊಂಡಿದ್ದಾರೆ ಮೇನಕಾ ಗಾಂಧಿ ಅವರು ಇಸ್ಕಾನ್ ಮೇಲೆ ಗಂಭೀರ ಆರೋಪ ಮಾಡಿರುವ ಹೇಳಿಕೆಯ ವೀಡಿಯೋ ವೈರಲ್ ಆಗಿದೆ. ಇದರಲ್ಲಿ ಮೇನಕಾ ಗಾಂಧಿ, “ಒಂದು ನಿಮಿಷ. ನಾನು ನಿಮಗೆ ಹೇಳಿಬಿಡುತ್ತೇನೆ. ಈ ದೇಶದಲ್ಲಿ ಅತೀ ದೊಡ್ಡ ಮೋಸಗಾರರು ಯಾರಾದರೂ ಇದ್ದರೆ ಅದು ಇಸ್ಕಾನ್.

ಇವರು ಗೋ ಶಾಲೆಗಳನ್ನು ನಡೆಸಲು ಸರ್ಕಾರದಿಂದ ಬೇಕಾದ ಸೌಲಭ್ಯ, ದೊಡ್ಡ ದೊಡ್ಡ ಜಮೀನುಗಳು, ಗೋಮಾಳಗಳು ಎಲ್ಲ ವ್ಯವಸ್ಥೆ ಸಿಗುತ್ತವೆ. ಇತ್ತೀಚೆಗಷ್ಟೇ ನಾನು ಇಸ್ಕಾನ್ ನ ಅನಂತಪುರದ ಗೋ ಶಾಲೆಗೆ ಭೇಟಿ ನೀಡಿದ್ದೆ. ಅಲ್ಲಿ ಒಂದೇ ಒಂದು ಹಸುವೂ ಇರಲಿಲ್ಲ. ಸಂಪೂರ್ಣ ಹೈನುಗಾರಿಕೆ ಯೋಗ್ಯವಾದ ಹಸುವಾಗಲಿ ಇಲ್ಲವೇ ಕರುಗಳಾಲಿ ಇರಲಿಲ್ಲ.

ಎಲ್ಲಾ ಕರುಗಳು ಮಾರಾಟವಾಗಿದೆ ಎಂಬುದೇ ಇದರ ಸಾರಾಂಶ. ಬೀದಿ ಬೀದಿಗಳಲ್ಲಿ ಹರೇ ರಾಮ್- ಹರೇ ಕೃಷ್ಣ ಎಂದು ಹೇಳಿಕೊಂಡು ಅಡ್ಡಾಡುವ ಇವರು ಹಾಲಿನಲ್ಲೇ ಅವರ ಜೀವನವಿದೆ ಎಂಬಂತೇ ಹೇಳಿಕೊಳ್ಳುತ್ತಾರೆ.

ಇಸ್ಕಾನ್ ವಿರುದ್ಧ ಗೋಶಾಲೆಗಳಲ್ಲಿರುವ ಗೋವುಗಳನ್ನು ಕಟುಕರಿಗೆ ಮಾರಾಟ ಮಾಡುತ್ತಿದೆ ಎಂದು ಆರೋಪ ಮಾಡಿದ್ದು ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಂಸ್ಥೆ,  ಇದೆಲ್ಲಾ ಸುಳ್ಳು ನಾವು ಯಾವ ಕಟುಕರಿಗೂ ಗೋವುಗಳನ್ನು ಮಾರಾಟ ಮಾಡುವುದಿಲ್ಲ ನಾವು ಗೋವುಗಳನ್ನು ರಕ್ಷಣೆ ಮಾಡುವವರು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಸಂಸದೆ ಮಾಡಿರುವ ಆರೋಪಗಳೆಲ್ಲವೂ ಸುಳ್ಳು ನಾವು ಗೋಮಾಂಸವೇ ಪ್ರಧಾನ ಆಹಾರವಾಗಿರುವ ವಿಶ್ವದ ಹಲವು ಭಾಗಗಳಲ್ಲಿ ಇಸ್ಕಾನ್ ಗೋಸಂರಕ್ಷಣೆಯನ್ನು ಮಾಡುತ್ತಿದೆ ಎಂದು ಇಸ್ಕಾನ್ ರಾಷ್ಟ್ರೀಯ ವಕ್ತಾರ ಯುಧಿಸ್ತಿರ್ ಗೋವಿಂದ ದಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Related posts

ಕಾವೇರಿ ನೀರು ವಿವಾದ:  ರಾಜಕೀಯ ಮರೆತು ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧಾರ-ಡಿಸಿಎಂ ಡಿ.ಕೆ ಶಿವಕುಮಾರ್.

ಉದ್ಯೋಗಿಗಳ ಯೋಗಕ್ಷೇಮ: ವಿಶ್ವದಲ್ಲೇ ಭಾರತಕ್ಕೆ 2ನೇ ಸ್ಥಾನ.

ನಿಫಾ ವೈರಸ್ ಭೀತಿ: ನಮ್ಮ ರಾಜ್ಯದಲ್ಲಿ ಅಂತ ಯಾವುದೇ ಪ್ರಕರಣ ಬೆಳಕಿಗೆ ಬಂದಿಲ್ಲ-ಆರೋಗ್ಯ ಸಚಿವ ದಿನೇಶ್ ಗುಂಡೂರಾವ್