ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಿರಿಧಾನ್ಯಗಳ ಬಳಕೆಯ ಅರಿವು ಮೂಡಿಸುವುದು ಅವಶ್ಯಕ-ಉದ್ಯಮಿ ಚಂದ್ರಹಾಸ್ ಶೆಟ್ಟಿ

ಶಿವಮೊಗ್ಗ: ಸಿರಿಧಾನ್ಯಗಳ ಬಗ್ಗೆ ಹೆಚ್ಚು ಅರಿವು ಮೂಡಿಸುವ ಅಗತ್ಯವಿದ್ದು, ಆರೋಗ್ಯ ಸದೃಢತೆ ಕಾಪಾಡಿಕೊಳ್ಳಲು ಸಿರಿಧಾನ್ಯಗಳ ಬಳಕೆ ಸಹಕಾರಿಯಾಗುತ್ತದೆ ಎಂದು ಉದ್ಯಮಿ ಚಂದ್ರಹಾಸ್ ಶೆಟ್ಟಿ ಹೇಳಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಿರಿಧಾನ್ಯದಿಂದ ಆಹಾರ ತಯಾರಿಸುವ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಮಾರುಕಟ್ಟೆಯಲ್ಲಿ ಸಿರಿಧಾನ್ಯಗಳು ಹೆಚ್ಚು ಲಭ್ಯವಿದ್ದು, ಪ್ರತಿಯೊಬ್ಬರು ಸಿರಿಧಾನ್ಯಗಳ ಮಹತ್ವ ಅರಿತುಕೊಂಡು ಬಳಸಬೇಕು ಎಂದು ಸಲಹೆ ನೀಡಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್ ಮಾತನಾಡಿ, ಸಿರಿಧಾನ್ಯಗಳಿಂದ ಪ್ರತಿ ನಿತ್ಯ ತಿಂಡಿ ತಿನಿಸುವ ಮಾಡಿಕೊಳ್ಳುವ ದೃಷ್ಠಿಯಿಂದ ಸ್ಪರ್ಧೆಯು ಅತ್ಯಂತ ಉಪಯುಕ್ತ ಆಗಿದ್ದು, ಮುಂದಿನ ಪೀಳಿಗೆಗೆ ಸಿರಿಧಾನ್ಯದ ಅಡುಗೆಗಳ ಬಗ್ಗೆ ಹೆಚ್ಚು ಕಲಿಸಿಕೊಡಬೇಕು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ ಗಣೇಶ ಅಂಗಡಿ ಮಾತನಾಡಿ, 2023ನೇ ವರ್ಷವನ್ನು ವಿಶ್ವ ಸಿರಿಧಾನ್ಯ ವರ್ಷ ಘೋಷಿಸಿರುವ ಹಿನ್ನೆಲೆ ಹಾಗೂ ವಿಶ್ವ ಆಹಾರ ದಿನಾಚರಣೆ ಪ್ರಯುಕ್ತ ಸಂಘದ ವತಿಯಿಂದ ವಿಶೇಷ ಸ್ಪರ್ಧೆ ಹಮ್ಮಿಕೊಂಡು ಅರಿವು ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ ಎಂದರು.
ರುಚಿ ಶುಚಿಯಾಗಿ ಸಿರಿಧಾನ್ಯ ಆಹಾರ ತಯಾರಿಸುವ ಸ್ಪರ್ಧೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಉತ್ತಮವಾಗಿ ಆಹಾರ ತಯಾರಿಸಿದವರಿಗೆ ಬಹುಮಾನ ವಿತರಿಸಲಾಯಿತು. ನಂದಿನಿ ನಾಗರಾಜ್, ಡಾ. ಪಲ್ಲವಿ ಹಾಗೂ ಸೋಮಶೇಖರ್ ತೀರ್ಪುಗಾರರಾಗಿ ಭಾಗವಹಿಸಿದ್ದರು.
ಎಫ್‌ಕೆಸಿಸಿಐ ಮ್ಯಾನೇಜಿಂಗ್ ಕಮಿಟಿ ಸದಸ್ಯ ಡಿ.ಎಂ.ಶಂಕರಪ್ಪ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಸವಿತಾ ಮಾಧವ್ ಮತ್ತಿತರರು ಉಪಸ್ಥಿತರಿದ್ದರು.

Related posts

ಪಠ್ಯ ಪುಸ್ತಕ ವಿಷಯಗಳಲ್ಲಿ ಹೇರಿಕೆಯ ಬದಲಾವಣೆ ಸಲ್ಲದು -ಜಿ.ಎಸ್. ನಾರಾಯಣರಾವ್

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್.

ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ನಿವೃತ್ತಿ; ಮುಂದಿನ ಸಿಎಸ್ ಯಾರು? ಹಲವರ ಹೆಸರು ಮುನ್ನೆಲೆಗೆ…